ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಟಿಕನ್‌: ವಿಶ್ರಾಂತ ಪೋಪ್‌ 16ನೇ ಬೆನೆಡಿಕ್ಟ್‌ ಆರೋಗ್ಯ ಸ್ಥಿತಿ ಗಂಭೀರ

Last Updated 28 ಡಿಸೆಂಬರ್ 2022, 16:10 IST
ಅಕ್ಷರ ಗಾತ್ರ

ವ್ಯಾಟಿಕನ್‌ ಸಿಟಿ (ಎಪಿ): ವಿಶ್ರಾಂತ ಪೋಪ್‌, 95 ವರ್ಷದ 16ನೇ ಬೆನೆಡಿಕ್ಟ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ ಎಂದು ವ್ಯಾಟಿಕನ್ ವಕ್ತಾರರು ಬುಧವಾರ ತಿಳಿಸಿದ್ದಾರೆ.

‘ಪೋಪ್‌ ಫ್ರಾನ್ಸಿಸ್‌ ಬುಧವಾರ ಬೆನೆಡಿಕ್ಟ್‌ ಅವರ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಬೆನೆಡಿಕ್ಟ್‌ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. , ವೈದ್ಯರು ಬೆನೆಡಿಕ್ಟ್‌ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

600 ವರ್ಷಗಳ ಇತಿಹಾಸದಲ್ಲಿ ರಾಜೀನಾಮೆ ಸಲ್ಲಿಸಿದ ಮೊದಲ ಪೋಪ್‌ ಬೆನೆಡಿಕ್ಟ್ ಅವರಾಗಿದ್ದಾರೆ. ಅವರು 2013ರಲ್ಲಿ ನಿವೃತ್ತಿ ಹೊಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT