ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಚೀನಾದ ಬೇಹುಗಾರಿಕಾ ಬಲೂನು ಹೊಡೆದುರುಳಿಸಿದ ಅಮೆರಿಕ

Last Updated 5 ಫೆಬ್ರವರಿ 2023, 11:20 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕದ ವಾಯು ಪ್ರದೇಶದಲ್ಲಿ ಪತ್ತೆಯಾಗಿರುವ ಚೀನಾದ ಬೇಹುಗಾರಿಕಾ ಬಲೂನು ಅನ್ನು ಹೊಡೆದುರುಳಿಸಲಾಗಿದೆ ಎಂದು ಪೆಂಟಗನ್ ಹೇಳಿದೆ.

ಇದಕ್ಕೆ ಸಂಬಂಧಪಟ್ಟ ಎನ್ನಲಾದ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಸುದ್ದಿಸಂಸ್ಥೆ ಎನ್‌ಡಿಟಿವಿ ವರದಿ ಮಾಡಿದೆ.

ಅಟ್ಲಾಂಟಿಕ್ ಸಾಗರದ ಮೇಲಿನ ವಾಯುಪ್ರದೇಶದಲ್ಲಿ ಮಿಸೈಲ್ ಬಳಸಿ ಚೀನಾದ ಬೇಹಗಾರಿಕಾ ಬಲೂನು ಅನ್ನು ಹೊಡೆದುರುಳಿಸಲಾಗಿದೆ.

ಗ್ರಹಾಂ ಅಲೆನ್ ಎಂಬುವವರ ಟ್ವಿಟರ್ ಖಾತೆಯಲ್ಲಿ ವಿಡಿಯೊ ಹಂಚಲಾಗಿದೆ.

ಮತ್ತೊಂದೆಡೆ ಅಮೆರಿಕ ಕ್ರಮವನ್ನು ಚೀನಾ ಬಲವಾಗಿ ಖಂಡಿಸಿದೆ. ಅಲ್ಲದೆ ಕಠಿಣ ಕ್ರಮದ ಎಚ್ಚರಿಕೆಯನ್ನು ರವಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT