ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿಯೂ ಕೊರೊನಾ ವೈರಸ್‌ ಪ್ರಕರಣಗಳಲ್ಲಿ ಮತ್ತೆ ಏರಿಕೆ

Last Updated 8 ಏಪ್ರಿಲ್ 2022, 14:21 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ಹಲವು ಭಾಗಗಳಲ್ಲಿ ಇತ್ತೀಚಿನ ವಾರಗಳಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಳಗೊಂಡಿವೆ. ಇದರ ಮಧ್ಯೆಯೇ ನ್ಯೂಯಾರ್ಕ್ ನಗರ ಮತ್ತು ವಾಷಿಂಗ್ಟನ್, ಡಿಸಿಗಳಲ್ಲಿಯೂ ಕಳೆದ ಎರಡು ವಾರಗಳಲ್ಲಿ ಪ್ರಕರಣಗಳು ತೀವ್ರ ಏರಿಕೆ ಕಂಡು ಬಂದಿದೆ.

ನ್ಯೂಯಾರ್ಕ್ ಟೈಮ್ಸ್ ಅಂಕಿಅಂಶಗಳ ಪ್ರಕಾರ, ವಾಷಿಂಗ್ಟನ್‌ನಲ್ಲಿ ಪ್ರಕರಣಗಳು ದ್ವಿಗುಣಗೊಂಡಿವೆ. ಮಾರ್ಚ್ ಕೊನೆಯ ವಾರದಿಂದ ನ್ಯೂಯಾರ್ಕ್ ನಗರದಲ್ಲಿ ಶೇ 60 ರಷ್ಟು ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ‘ನ್ಯೂಯಾರ್ಕ್‌ ಟೈಮ್ಸ್‌’ ವರದಿ ಮಾಡಿದೆ.

ಅಲಾಸ್ಕಾ, ವರ್ಮೊಂಟ್, ಕೊಲೊರಾಡೋ, ರೋಡ್ ಐಲ್ಯಾಂಡ್ ಮತ್ತು ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳು ಏರುಗತಿಯಲ್ಲಿವೆ. ಯುರೋಪ್‌ನಲ್ಲಿಯೂ ಇತ್ತೀಚೆಗೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೊಸ ಅಲೆಯೊಂದು ಬರುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ. ಇದು ಅಮೆರಿಕಕ್ಕೆ ಎಚ್ಚರಿಕೆಯ ಗಂಟೆಯೂ ಹೌದು ಎಂದು ವಿಶ್ಲೇಷಿಸಲಾಗುತ್ತಿದೆ.

ವಾಷಿಂಗ್ಟನ್‌ನಲ್ಲಿ ಕೊರೊನಾ ವೈರಸ್‌ ಉಲ್ಬಣಗೊಳ್ಳುತ್ತಿರುವ ಪರಿಣಾಮವಾಗಿ, ಅಲ್ಲಿ ಹಲವು ರಾಜಕಾರಣಿಗಳಿಗೆ ಸೋಂಕು ತಗುಲಿದ ಬಗ್ಗೆ ವರದಿಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT