ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ವೇಳೆ ಐದು ಯುದ್ಧವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಹೇಳಿದ್ದರು. ಎರಡೂ ದೇಶಗಳು ಸೇರಿ ಒಟ್ಟು ಐದು ಯುದ್ಧವಿಮಾನಗಳು ನಾಶವಾಗಿವೆಯೇ? ಅಥವಾ ಯಾವ ದೇಶವು ಮತ್ತೊಂದು ದೇಶದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಟ್ರಂಪ್ ಅವರು ನಿರ್ದಿಷ್ಟವಾಗಿ ಹೇಳಿರಲಿಲ್ಲ.