ಬ್ರೂನೈಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಅವರು ಅಲ್ಲಿಂದ ಸಿಂಗಪುರಕ್ಕೆ ಭೇಟಿ ನೀಡಿದ್ದಾರೆ.
ಸಿಂಗಪುರದಲ್ಲಿ ಮೋದಿ ಅವರಿಗೆ ಭಾರತೀಯ ಸಮುದಾಯದವರು ಭವ್ಯ ಸ್ವಾಗತ ನೀಡಿದ್ದಾರೆ. ಈ ವೇಳೆ ಭಾರತೀಯ ಸಾಂಸ್ಕೃತಿಕ ನೃತ್ಯಗಳ ವೈಭವವನ್ನು ಪ್ರದರ್ಶಿಸಲಾಯಿತು.
ಇದನ್ನು ವೀಕ್ಷಿಸಿದ ಪ್ರಧಾನಿ ಮೋದಿ, ಬಳಿಕ ಸ್ವತಃ ತಾವೇ ಡೋಲು ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ಅಭಿಮಾನಿಗಳಿಗೆ ಹಸ್ತಾಕ್ಷರವನ್ನು ನೀಡಲು ಮರೆಯಲಿಲ್ಲ.
ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ.
ಸಿಂಗಪುರಕ್ಕೆ ಬಂದಿಳಿದ ಪ್ರಧಾನಿ ಮೋದಿ, 'ಭಾರತ ಹಾಗೂ ಸಿಂಗಪುರ ನಡುವಣ ಬಾಂಧವ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆಯನ್ನು ಎದುರು ನೋಡುತ್ತಿದ್ದೇನೆ' ಎಂದು ತಿಳಿಸಿದ್ದಾರೆ.
ಸಿಂಗಪುರದ ಉದ್ಯಮಿಗಳೊಂದಿಗೂ ಪ್ರಧಾನಿ ಮೋದಿ ಸಮಾಲೋಚನೆ ನಡೆಸಲಿದ್ದಾರೆ.