ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಹಮಾಸ್‌ ನಿರ್ಧಾರ ಸ್ವಾಗತಾರ್ಹ: ಅಮೆರಿಕ

Published 22 ನವೆಂಬರ್ 2023, 5:53 IST
Last Updated 22 ನವೆಂಬರ್ 2023, 5:53 IST
ಅಕ್ಷರ ಗಾತ್ರ

ವಾಷಿಂಗ್ಟನ್: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಮಾಡುವ ಹಮಾಸ್ ಬಂಡುಕೋರರ ನಿರ್ಧಾರವನ್ನು ಅಮೆರಿಕ ಸ್ವಾಗತಿಸಿದೆ.

ಗಾಜಾದಲ್ಲಿ ಅಮೆರಿಕನ್ನರು ಸೇರಿದಂತೆ 50 ಮಂದಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದನ್ನು ನಾವು ಸ್ವಾಗತಿಸುತ್ತೇವೆ. ಕತಾರ್ ಮತ್ತು ಈಜಿಪ್ಟ್ ನಾಯಕರ ಮಧ್ಯಸ್ಥಿಕೆಗಾಗಿ ನಾನು ಧನ್ಯವಾದ ಸಲ್ಲಿಸುತ್ತೇನೆ. ಗಾಜಾದಲ್ಲಿರುವ ಪ್ಯಾಲೆಸ್ಟೀನಿಯರಿಗೆ ಮಾನವೀಯ ನೆರವು ತಲುಪಲು ಅನುವು ಮಾಡಿಕೊಡುವ ಉದ್ದೇಶದಿಂದ ಇಸ್ರೇಲ್‌ ಕದನ ವಿರಾಮ ಘೋಷಿಸಿರುವುದನ್ನು ನಾನು ಪ್ರಶಂಸಿಸುತ್ತೇನೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ಗಾಜಾದಲ್ಲಿ ನಾಲ್ಕು ದಿನಗಳ ಯುದ್ಧ ವಿರಾಮ ಕುರಿತಾದ ಪ್ಯಾಲೆಸ್ಟೀನ್‌ನ ಹಮಾಸ್ ಉಗ್ರಗಾಮಿಗಳ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಲು ಇಸ್ರೇಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾಲ್ಕು ದಿನಗಳಲ್ಲಿ 50 ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲಾಗುವುದು. ಈ ಸಮಯದಲ್ಲಿ ಯುದ್ಧ ವಿರಾಮ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯದ ಹೇಳಿಕೆ ತಿಳಿಸಿದೆ.

ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್‌ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್‌ ಒಪ್ಪಂದವು ಸನ್ನಿಹಿತವಾಗಿದೆ ಎಂದು ಕೆಲ ದಿನಗಳಿಂದ ಹೇಳುತ್ತಿದ್ದರು. ಈಗ ಅದು ನಿಜವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT