ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ–20 ಶೃಂಗ ಯಶಸ್ವಿ: ಭಾರತ, ಪ್ರಧಾನಿ ಮೋದಿ ಶ್ಲಾಘಿಸಿದ ಅಮೆರಿಕ

Published 19 ಸೆಪ್ಟೆಂಬರ್ 2023, 13:09 IST
Last Updated 19 ಸೆಪ್ಟೆಂಬರ್ 2023, 13:09 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಜಿ–20 ಶೃಂಗದ ನೇತೃತ್ವ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತಕ್ಕೆ ಅಮೆರಿಕ ಅಭಾರಿಯಾಗಿದೆ. ದೆಹಲಿಯಲ್ಲಿ ನಡೆದ ಜಿ–20 ರಾಷ್ಟ್ರಗಳ ನಾಯಕರ ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷ ಜೋ ಬೈಡನ್ ’ಸಕಾರಾತ್ಮಕ ಮತ್ತು ಆಶಾಭಾವನೆಯಲ್ಲಿದ್ದಾರೆ’ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ಕುರಿತು ಪಿಟಿಐ ಸುದ್ದಿಸಂಸ್ಥೆ ಸೋಮವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಭದ್ರತಾ ಮಂಡಳಿಯ(ಎನ್‌ಎಸ್‌ಸಿ) ಕಾರ್ಯತಂತ್ರ ಸಂವಹನದ ಸಮನ್ವಯ ಅಧಿಕಾರಿ ಜಾನ್ ಕಿರ್ಬಿ, ನವದೆಹಲಿಯಲ್ಲಿ ನಡೆದ ಜಿ–20 ಶೃಂಗ ಸಭೆಯಲ್ಲಿ ಉತ್ತಮ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಜತೆಗೆ ನಿರ್ಣಯಗಳನ್ನು ಕಾರ್ಯರೂಪಕ್ಕೆ ತಂದ ರೀತಿಗಾಗಿ ಜಿ–20 ಶೃಂಗದ ಅಧ್ಯಕ್ಷತೆ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತಕ್ಕೆ ನಾವೆಲ್ಲರೂ ಅಭಾರಿಯಾಗಿದ್ದೇವೆ ಎಂದು ಹೇಳಿದ್ದಾರೆ. 

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನ ಆರಂಭವಾಗಿದ್ದು, ಅಮೆರಿಕದ ಆದ್ಯತೆಗಳು ಮತ್ತು ವಿದೇಶಾಂಗ ನೀತಿ ವಿಚಾರಗಳ ಕುರಿತು ಕಿರ್ಬಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. 

ಸಾಮಾನ್ಯಸಭೆಯಲ್ಲಿ 193 ಸದಸ್ಯ ರಾಷ್ಟ್ರಗಳನ್ನು ಉದ್ದೇಶಿಸಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಮಾತನಾಡಲಿದ್ದಾರೆ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT