ಜಿನಿವಾ: ‘ಕೋವಿಡ್ -19ನ ಹೊಸ ರೂಪಾಂತರ ತಳಿಗಳು ಪ್ರಪಂಚದಾದ್ಯಂತ ಹರಡುವ ಅಪಾಯವಿದೆ. ಇದು ಸಾಂಕ್ರಾಮಿಕ ರೋಗ ತಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸುವ ಸಾಧ್ಯತೆ ಅಧಿಕವಾಗಿದೆ,‘ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಸಮಿತಿಯು ಗುರುವಾರ ಎಚ್ಚರಿಕೆ ನೀಡಿದೆ.

ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ನಡೆದ ಸಭೆಯ ನಂತರ ಸಮಿತಿಯು ಈ ಎಚ್ಚರಿಕೆ ನೀಡಿದೆ.

‘ಕೋವಿಡ್‌ಗೆ ಸಂಬಂಧಿಸಿದ ಇತ್ತೀಚಿನ ಪ್ರವೃತ್ತಿಗಳು ಚಿಂತೆಗೀಡು ಮಾಡಿವೆ’ ಎಂದು ಸಮಿತಿಯ ಅಧ್ಯಕ್ಷ ಡಿಡಿಯರ್ ಹೌಸಿನ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

‘ಒಂದೂವರೆ ವರ್ಷದ ಹಿಂದೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಆದರೆ, ಈಗಲೂ ಅದೇ ಪರಿಸ್ಥಿತಿಯಲ್ಲೇ ಮುಂದುವರಿದಿದೆ,‘ ಎಂದು ಅವರು ನಿರಾಶೆ ವ್ಯಕ್ತಪಡಿಸಿದರು.

ಸದ್ಯಕ್ಕೆ ಕೋವಿಡ್-19ನ ನಾಲ್ಕು ರೂಪಾಂತರಗಳು ಜಾಗತಿಕವಾಗಿ ಆತಂಕ ಉಂಟು ಮಾಡಿವೆ. ಆಲ್ಫಾ, ಬೀಟಾ, ಗಾಮಾ ಮತ್ತು ವಿಶೇಷವಾಗಿ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ, ಅತಿ ವೇಗವಾಗಿ ಹರಡುತ್ತಿರುವ ಡೆಲ್ಟಾ ರೂಪಾಂತರಗಳು ಪ್ರಾಬಲ್ಯ ಸಾಧಿಸಿವೆ ಎಂದು ಅವರು ತಿಳಿಸಿದರು.

’ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಕಠಿಣವಾಗಬಹುದು. ಹೊಸ ಆತಂಕಕಾರಿ ರೂಪಾಂತರ ತಳಿಗಳು ಉದ್ಘವಿಸಬಹುದು. ಅವುಗಳ ಕಾರಣದಿಂದಾಗಿ ಪರಿಸ್ಥಿತಿ ಮತ್ತಷ್ಟು ಜಟಲಿವಾಗಬಹುದು,‘ ಎಂದು ಸಮಿತಿ ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.