ವಿಶ್ವಸಂಸ್ಥೆ: ಕೋವಿಡ್–19 ನಿಯಂತ್ರಣದ ಸಲುವಾಗಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

ಔಷಧ ತಯಾರಿಕ ಕಂಪನಿಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಈ ಲಸಿಕೆಯನ್ನು ತಯಾರಿಸಿದೆ. ಭಾರತದಲ್ಲಿ ಸೆರಂ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನುವೇಗವಾಗಿ ವಿತರಣೆ ಮಾಡಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸುಸ್ ಹೇಳಿದ್ದಾರೆ.

ಇದನ್ನು ಇತರೆ ಲಸಿಕೆಗಳಿಗೆ ಹೋಲಿಸಿದರೆ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.