ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಖಾಯಂ ಸದಸ್ಯತ್ವ ಪಡೆದಿಲ್ಲ ಏಕೆ? ಮಸ್ಕ್

Published 23 ಜನವರಿ 2024, 8:27 IST
Last Updated 23 ಜನವರಿ 2024, 8:27 IST
ಅಕ್ಷರ ಗಾತ್ರ

ನ್ಯೂಯಾರ್ಕ್: ವಿಶ್ವದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆಯಲು ಅರ್ಹತೆ ಹೊಂದಿದೆ ಎಂದು ಉದ್ಯಮಿ ಎಲಾನ್‌ ಮಸ್ಕ್ ಹೇಳಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಆಫ್ರಿಕಾದ ರಾಷ್ಟ್ರಗಳು ಒಂದು ಸ್ಥಾನವೂ ಪಡೆಯದಿರುವುದರ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ ಬಳಿಕ ಇದೀಗ ಮಸ್ಕ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಬಲಿಷ್ಠರಾಷ್ಟ್ರಗಳು ತಮ್ಮ ಅಧಿಕಾರವನ್ನು ಬಿಟ್ಟು ಕೊಡುವುದಿಲ್ಲ, ಇದೇ ಸಮಸ್ಯೆಯಾಗಿದೆ. ವಿಶ್ವದ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಪ್ರತಿನಿಧಿಸುತ್ತಿಲ್ಲ ಎಂದಿದ್ದಾರೆ.

ವಿಶ್ವದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶವು ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆದಿಲ್ಲ ಎಂಬುದು ಅಸಂಬದ್ಧವಾಗಿದೆ. ಖಾಯಂ ಸದಸ್ಯತ್ವ ಪಡೆಯಲು ಭಾರತ ಮುಂಚೂಣಿಯಲ್ಲಿದೆ ಎಂದು ಮಸ್ಕ್ ಹೇಳಿದ್ದಾರೆ.

ಪ್ರಸ್ತುತ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಐದು ಖಾಯಂ ಸದಸ್ಯರನ್ನು ಹೊಂದಿದೆ. ಚೀನಾ, ಫ್ರಾನ್ಸ್, ರಷ್ಯಾ, ಅಮೆರಿಕಾ ಮತ್ತು ಇಂಗ್ಲೆಂಡ್‌ . ಈ ಐದು ರಾಷ್ಟ್ರಗಳು ವಿಟೋ ಅಧಿಕಾರ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT