ಬಾಲಿ (ಪಿಟಿಐ):ಇಂಡೊನೇಷ್ಯಾದ ಬಾಲಿಯಲ್ಲಿ ನವೆಂಬರ್ 15 ಮತ್ತು 16ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾರತ, ಅಮೆರಿಕ, ಚೀನಾ, ಬ್ರಿಟನ್ ಸೇರಿದಂತೆ ಹಲವು ದೇಶಗಳ ನಾಯಕರು ಭಾಗಿಯಾಲಿದ್ದಾರೆ.

ಭಾರತ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್, ಚೀನಾ ಅಧ್ಯಕ್ಷ ಷಿ–ಜಿನ್‌ಪಿಂಗ್ ಸೇರಿ ಅನೇಕ ಜಾಗತಿಕ ನಾಯಕರು ಭಾಗಿಯಾಗಲಿದ್ದಾರೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಬದಲಾಗಿ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರನ್ನು ಶೃಂಗಸಭೆಗೆ ಕಳುಹಿಸುತ್ತಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರು ವರ್ಚುವಲ್ ಆಗಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರುಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಜೊತೆಗೆ, ಕೆಲವು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಆದರೆ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ–ಜಿನ್‌ಪಿಂಗ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಯಲಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಒಂದು ವೇಳೆ ಉಭಯ ದೇಶಗಳ ನಾಯಕರೊಂದಿಗೆ ಸಭೆ ನಡೆದಲ್ಲಿ 2020 ಗಾಲ್ವಾನ್ ಕಣಿವೆ ಸಂಘರ್ಷದ ನಂತರ ನಡೆಯುವ ಮೊದಲ ಸಭೆ ಇದಾಗಿರಲಿದೆ.

ಸದ್ಯ ಇಂಡೊನೇಷ್ಯಾ ಜಿ20 ಗುಂಪಿನ ಅಧ್ಯಕ್ಷತೆ ಹೊಂದಿದೆ.ಡಿಸೆಂಬರ್ 1ರಂದುಭಾರತವು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.