ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಬೆದರಿಕೆ ಒಡ್ಡಲು ಶ್ರೀಲಂಕಾ ನೆಲೆಯಾಗದು: ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ

Published 27 ಜೂನ್ 2023, 14:29 IST
Last Updated 27 ಜೂನ್ 2023, 14:29 IST
ಅಕ್ಷರ ಗಾತ್ರ

ಕೊಲಂಬೊ: ಭಾರತಕ್ಕೆ ಬೆದರಿಕೆ ಒಡ್ಡಲು ಶ್ರೀಲಂಕಾವನ್ನು ನೆಲೆಯಾಗಿ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಹೇಳಿದ್ದಾರೆ.

ಈ ವಿಷಯದಲ್ಲಿ ದ್ವೀಪ ರಾಷ್ಟ್ರವು ‘ತಟಸ್ಥ’ವಾಗಿ ಉಳಿಯಲಿದೆ. ಚೀನಾದ ಜೊತೆಗೆ ಈ ಕುರಿತು ಯಾವುದೇ ಮಿಲಿಟರಿ ಒಪ್ಪಂದ ಆಗಿಲ್ಲ ಎಂದು ಅವರು ಹೇಳಿದ್ದಾರೆ.

ಬ್ರಿಟನ್‌ ಮತ್ತು ಫ್ರಾನ್ಸ್‌ನ ಅಧಿಕೃತ ಪ್ರವಾಸದಲ್ಲಿರುವ ರಾನಿಲ್ ವಿಕ್ರಮಸಿಂಘೆ ಅವರು, ಫ್ರಾನ್ಸ್‌ನ ಅಧಿಕೃತ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT