ವುಹಾನ್: ಕೊರೊನಾ ವೈರಸ್ ಮೊದಲು ಪತ್ತೆಯಾಗಿದ್ದ ಚೀನಾದ ವುಹಾನ್ ನಗರದಲ್ಲಿ ಈಗ ಜನಜೀವನ ಸಹಜ ಸ್ಥಿತಿಗೆ ಬಂದಿದೆ.

ಕಳೆದ ಒಂದು ವರ್ಷದ ಹಿಂದೆ ಸರಿಯಾಗಿ ಚೀನಾದ ವುಹಾನ್ ನಗರದಲ್ಲಿ ಕೊರೊನಾ ವೈರಸ್ ನಿಯಂತ್ರಿಸಲು 76 ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿತ್ತು.

1.1 ಕೋಟಿ ಜನರಿರುವ ವುಹಾನ್ ನಗರದಲ್ಲಿ ವೈರಸ್ ಸೋಂಕಿನಿಂದ 4,635 ಮಂದಿ ಸಾವಿಗೀಡಾಗಿದ್ದಾರೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಪ್ರಮಾಣ ಅತಿ ಕಡಿಮೆಯಾಗಿದೆ.

ಆದರೆ, ವೈರಸ್ ಎಲ್ಲಿ ಸೃಷ್ಟಿಯಾಯಿತು ಮತ್ತು ಚೀನಾದ ಅಧಿಕಾರಿಗಳು ತ್ವರಿತಗತಿಯಲ್ಲಿ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಿಲ್ಲ ಏಕೆ ಎನ್ನುವ ಪ್ರಶ್ನೆಗಳಿಗೆ ಇನ್ನೂ ಉತ್ತರ ದೊರೆತಿಲ್ಲ.

ಚೀನಾದಲ್ಲಿ ಕೋವಿಡ್–19 ಲಸಿಕೆ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಲಸಿಕೆ ಪೂರೈಕೆಯಲ್ಲಿ ಕೊರತೆಯಾಗಿರುವುದರಿಂದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚೀನಾದಲ್ಲಿ ಮುಂದಿನ ತಿಂಗಳಿನಿಂದ ಚಂದ್ರಮಾನದ ಹೊಸ ವರ್ಷದ ರಜೆ ಆರಂಭವಾಗಲಿದೆ. ಆದರೆ, ಈ ರಜೆ ದಿನಗಳಲ್ಲಿ ಸಂಚಾರ ಕೈಗೊಳ್ಳದಂತೆ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದೆ. ಜತೆಗೆ ಗುಂಪುಗೂಡಬಾರದು ಮತ್ತು ಸಾಮೂಹಿಕ ಕಾರ್ಯಕ್ರಮಗಳನ್ನು ಮಾಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಕೊರೊನಾ ವೈರಸ್ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ ಎನ್ನುವ ಕಾರಣಕ್ಕೆ ಸರ್ಕಾರ ಈ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.