ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದ 9ನೇ ಆರೋಪಿ ಎಸ್.ಅಶ್ವತ್ಥ್ ಬಿನ್ ಶಿವಣ್ಣಗೌಡ ಅವರ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ಸೋಮವಾರ ಪ್ರಕಟಿಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪ್ರಾಸಿಕ್ಯೂಷನ್ ಸಾಕ್ಷಿಗಳ ವಿಚಾರಣೆ ಮುಗಿಯುವತನಕ ಆರೋಪಿ ಜೈಲಿನಲ್ಲಿರಬೇಕು. ಉಲ್ಲೇಖಿತ ಸಾಕ್ಷಿಗಳ ವಿಚಾರಣೆ ಮುಗಿದ ಬಳಿಕ ಪುನಃ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದೆ.

ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.