ಮೆಲ್ಬರ್ನ್, ಆಸ್ಟ್ರೇಲಿಯಾ: ‘ನ್ಯೂ ಸೌತ್ ವೇಲ್ಸ್‌ನಲ್ಲಿ ಕೋವಿಡ್‌ನ ಡೆಲ್ಟಾ ರೂಪಾಂತರ ತಳಿಯು ವೇಗವಾಗಿ ಹರಡುತ್ತಿದೆ. ಸಾಂಕ್ರಾಮಿಕದ ಆರಂಭಿಕ ದಿನಗಳಿಗೆ ಹೋಲಿಸಿದರೆ, ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಬೇರೆ ರಾಷ್ಟ್ರಗಳಲ್ಲೂ ಇದೇ ರೀತಿಯ ಬೆಳವಣಿಗೆಗಳನ್ನು ಗಮನಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ಈ ವಾರ ಕೋವಿಡ್–19ನಿಂದಾಗಿ ಸಿಡ್ನಿಯಲ್ಲಿ 27 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಳೆದ ತಿಂಗಳು 38 ವರ್ಷದ ಮಹಿಳೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ನ್ಯೂ ಸೌತ್ ವೇಲ್ಸ್‌ನಲ್ಲಿ ಜೂನ್ 13 ರಿಂದ ಜುಲೈ 17ರ ನಡುವೆ 30–49 ವಯಸ್ಸಿನ ಅತಿ ಹೆಚ್ಚು ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಅವಧಿಯಲ್ಲಿ 30 ರಿಂದ 40 ವಯಸ್ಸಿನ 45 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಇದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಟ್ಟು ಕೋವಿಡ್ ಸೋಂಕಿತರ ಪೈಕಿ ಶೇಕಡ 26ರಷ್ಟು ಪಾಲನ್ನು ಹೊಂದಿದೆ. 49 ಮತ್ತು ಅದಕ್ಕಿಂತ ಕೆಳಗಿನ ವಯಸ್ಸಿನ 13 ಮಂದಿ ಐಸಿಯುಗೆ ದಾಖಲಾಗಿದ್ದರು.

ವಯಸ್ಸಾದವರಿಗೆ ಕೋವಿಡ್‌ನಿಂದ ಹೆಚ್ಚು ಅಪಾಯ: ಕಳೆದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಹಿರಿಯ ನಾಗರಿಕರು ಸೋಂಕಿಗೆ ಗುರಿಯಾಗಿದ್ದರು. ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು.

ಸಾಂಕ್ರಾಮಿಕದ ಪ್ರಾರಂಭದಿಂದ ಈವರೆಗೆ ಈ ಅಂಕಿಅಂಶದಲ್ಲಿ ಬದಲಾವಣೆ ಕಂಡುಬಂದಿದೆ. ಪ್ರಸ್ತುತ ಆಸ್ಟ್ರೇಲಿಯಾ ಸೇರಿದಂತೆ ಇತರೆ ರಾಷ್ಟ್ರಗಳಲ್ಲಿ ಸೋಂಕಿಗೆ ಒಳಗಾಗುತ್ತಿರುವ ಯುವಕರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಆಸ್ಟ್ರೇಲಿಯಾದಲ್ಲಿ ಪಿಡುಗಿನ ಪ್ರಾರಂಭದಿಂದ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಪೈಕಿ 20 ರಿಂದ 29 ವಯಸ್ಸಿನ ಸೋಂಕಿತರು ಶೇಕಡ 22ರಷ್ಟು ಭಾಗವನ್ನು ಹೊಂದಿದ್ದಾರೆ.

ನ್ಯೂ ಸೌತ್ ವೇಲ್ಸ್‌ನಲ್ಲಿ ಗುರುವಾರ ವರದಿಯಾದ ಹೊಸ ಪ್ರಕರಣಗಳ ಪೈಕಿ ಶೇಕಡ 67 ರಷ್ಟು ಸೋಂಕಿತರು 40 ವರ್ಷದೊಳಗಿನವರು.

ಆಸ್ಟ್ರೇಲಿಯಾದಲ್ಲಿ ಯುವ ಜನರನ್ನು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹಿರಿಯ ನಾಗರಿಕರೂ ಮನೆಯಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅಲ್ಲದೆ ಯುವಕರು ಸಾಮಾಜಿಕ ಅಂತರದಂತಹ ನಿಯಮಗಳನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ಧಾರೆ. ಹಾಗಾಗಿ ಇತ್ತೀಚಿಗೆ 40 ವಯಸ್ಸಿಗಿಂತ ಕೆಳಗಿನವರಲ್ಲಿ ಸೋಂಕು ಹೆಚ್ಚು ಪತ್ತೆಯಾಗುತ್ತಿರಬಹುದು ಎಂದು ಹೇಳಲಾಗಿದೆ.

ಒಂದು ವೇಳೆ ಯುವ ಜನರಲ್ಲಿ ಹೀಗೆಯೇ ಸೋಂಕು ಹರಡುತ್ತಿದ್ದರೇ, ಅವರು ಕೂಡ ಕೋವಿಡ್‌ನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಬಹುದು. ಸಾವು ಕೂಡ ಸಂಭವಿಸಬಹುದು ಎಂದು ಹೇಳಲಾಗಿದೆ.

‘ಕೋವಿಡ್‌ನಿಂದ ಆಸ್ಪತ್ರೆಗೆ ದಾಖಲಾದ 19–29 ವಯಸ್ಸಿನವರಲ್ಲಿ ಶೇಕಡ 27 ರಷ್ಟು ಮಂದಿ ಶ್ವಾಸಕೋಶ ಅಥವಾ ಮೂತ್ರಪಿಂಡಗಳ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ’ ಎಂದು ಬ್ರಿಟನ್ ಅಧ್ಯಯನವೊಂದು ಹೇಳಿದೆ.

ದೇಶದಲ್ಲಿ ಹೆಚ್ಚು ಜನರು ಲಸಿಕೆ ಪಡೆಯುತ್ತಿದ್ದಂತೆ ಸೋಂಕಿನ ಹೊಸ ತಳಿಗಳು ಹುಟ್ಟಿಕೊಳ್ಳುತ್ತಿದೆ. ಪ್ರಸ್ತುತ ಜಾಗತಿಕವಾಗಿ ಡೆಲ್ಟಾ ರೂಪಾಂತರ ತಳಿಯು ತೀವ್ರವಾಗಿ ಹರಡುತ್ತಿದೆ. ಆಸ್ಟ್ರೇಲಿಯಾದಲ್ಲಿ ಇದೇ ತಳಿಯು ತಲೆನೋವಾಗಿ ಪರಿಣಮಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.