ಅಮೆರಿಕವು ರಷ್ಯಾದ ಮೇಲೆ ನಿರ್ಬಂಧ ವಿಧಿಸಲು ಮುಂದಾಗಿರುವುದನ್ನು ಚೀನಾ ಖಂಡಿಸಿದೆ. ‘ಎಲ್ಲಾ ಕಾನೂನುಬಾಹಿರ ಮತ್ತು ಏಕಪಕ್ಷೀಯ ನಿರ್ಬಂಧಗಳನ್ನು ಚೀನಾ ಬಲವಾಗಿ ವಿರೋಧಿಸುತ್ತದೆ. ಸುಂಕ ಸಮರದಲ್ಲಿ ಯಾರೂ ಗೆಲ್ಲುವುದಿಲ್ಲ. ಬೆದರಿಕೆ ಮತ್ತು ಒತ್ತಡದ ತಂತ್ರ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಹೇಳಿದ್ದಾರೆ.