ವಾಷಿಂಗ್ಟನ್ (ಎಎಫ್‌ಪಿ): ಅಮೆರಿಕವು ಆಫ್ಘಾನಿಸ್ತಾನದ ನಂಗರ್‌ಹಾರ್ ಮೇಲೆ ಈವರೆಗಿನ ಅತ್ಯಂತ ದೊಡ್ಡ ಸಾಂಪ್ರದಾಯಿಕ ಬಾಂಬ್ ಎಸೆದಿದೆ.
ನಂಗರ್‌ಹಾರ್‌ನಲ್ಲಿ ಈಚೆಗೆ, ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧದ ಹೋರಾಟದಲ್ಲಿ ಅಮೆರಿಕದ ‘ಗ್ರೀನ್ ಬೆರೆಟ್’ ಪಡೆಯ ಸೈನಿಕರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾಂಬ್ ಅನ್ನು ‘ಮ್ಯಾಸಿವ್ ಆರ್ಡಿನೆನ್ಸ್ ಏರ್ ಬ್ಲ್ಯಾಸ್ಟ್–ಎಂಒಎಬಿ’ ಎಂದು ಕರೆಯಲಾಗುತ್ತದೆ. 10.3 ಟನ್ ತೂಕದ ಈ ಬಾಂಬ್ ಭಾರಿ ಗಾತ್ರದಾದ್ದರಿಂದ, ‘ಮದರ್ ಆಫ್ ಆಲ್ ಬಾಂಬ್ಸ್’ ಎಂದೂ ಅಡ್ಡ ಹೆಸರಿನಿಂದ ಕರೆಯಲಾಗುತ್ತದೆ.

ಅಮೆರಿಕ 2003ರಲ್ಲಿ ಈ ಬಾಂಬ್‌ನ ಅಂತಿಮ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಆದರೆ ಇದೇ ಮೊದಲ ಬಾರಿ ಪ್ರಯೋಗಿಸಿದೆ.
ಗುರುವಾರ ಸಂಜೆ 7 ಗಂಟೆಗೆ ದಾಳಿ ನಡೆದಿದೆ.

ದಾಳಿಯಿಂದ ಆಗಿರುವ ಜೀವ ಮತ್ತು ಆಸ್ತಿ ಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.