ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ: ಪೌರತ್ವಕ್ಕೆ ಕಠಿಣ ನಿಯಮ

Last Updated 20 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಕ್ಯಾನ್‌ಬೆರ್ರಾ: ಆಸ್ಟ್ರೇಲಿಯಾದಲ್ಲಿ ಇನ್ನು ಮುಂದೆ ಪೌರತ್ವ ಪಡೆಯುವ ವಿದೇಶಿಯರಿಗೆ ಕಠಿಣ ಕಾನೂನುಗಳನ್ನು ರೂಪಿಸಲಾಗಿದೆ.

ಪೌರತ್ವಕ್ಕೆ ಸಂಬಂಧಿಸಿದ ಕಾನೂನುಗಳಿಗೆ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಂ ಟರ್ನ್ಬುಲ್ ಅವರು ಗುರುವಾರ ಪ್ರಕಟಿಸಿದ್ದಾರೆ.
ಪೌರತ್ವ ಬಯಸುವವರು ಇಂಗ್ಲಿಷ್‌ ಭಾಷೆಯ ಕೌಶಲಗಳ ಕುರಿತು ಕಠಿಣ ಪರೀಕ್ಷೆ ಎದುರಿಸಬೇಕು ಎಂದು ಪ್ರಧಾನಿ ತಿಳಿಸಿದ್ದಾರೆ.

ಪೌರತ್ವಕ್ಕೆ ಅರ್ಜಿ ಸಲ್ಲಿಸುವವರು ಆಸ್ಟ್ರೇಲಿಯಾದಲ್ಲಿ ಕನಿಷ್ಠ ನಾಲ್ಕು ವರ್ಷಗಳ ಕಾಲ ಶಾಶ್ವತ ನಿವಾಸಿಯಾಗಿರಬೇಕು. ಒಟ್ಟಾರೆ, ಪೌರತ್ವಕ್ಕೆ ಸಂಬಂಧಿಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಮೂರು ಅವಕಾಶಗಳನ್ನು ಮಾತ್ರ ನೀಡಲಾಗುವುದು. ಸದ್ಯಕ್ಕೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಯಾವುದೇ ರೀತಿಯ ನಿರ್ಬಂಧಗಳು ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಮೌಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯವಾಗಿತ್ತು ಎಂದು ಅವರು ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT