ಕೈರೊ (ಪಿಟಿಐ):  ಪ್ರಾಚೀನ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಈಜಿಫ್ಟ್ನ ಗಿಜಾದ ಮಹಾ ಪಿರಾಮಿಡ್ ಬಳಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಪೊಲೀಸರು ಸೇರಿ 9 ಮಂದಿ ಬಲಿಯಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಪಿರಮಿಡ್ ಸಮೀಪ ಅಡಗಿಕೊಂಡಿದ್ದ ಉಗ್ರನೊಬ್ಬನನ್ನು ಹತ್ಯೆಗೈಯಲು ಪೊಲೀಸರು ಶೋಧ ಕಾರ್ಯಾಚರಣೆಗೆ ಮುಂದಾದಾಗ ಈ ಸ್ಫೋಟ ಸಂಭವಿಸಿದೆ. ಪೊಲೀಸರು ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ಉಗ್ರರು ಅವರತ್ತ ಎಸೆದ ಬಾಂಬ್ ಸ್ಫೊಟಗೊಂಡಿತು ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

2011ರ ಈಜಿಫ್ಟ್ ಕ್ರಾಂತಿಯ ವರ್ಷಾಚರಣೆ ಬೆನ್ನಲ್ಲೇ ಈ ದಾಳಿ ನಡೆದಿರುವುದರಿಂದ ದೇಶದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ.

ಬುಧವಾರ ಉತ್ತರ ಸಿನಾಯ್ ಬಳಿ ನಡೆದ ಮತ್ತೊಂದು ಉಗ್ರರ ದಾಳಿಯಲ್ಲಿ ಕನಿಷ್ಠ ಐವರು ಪೊಲೀಸರು ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.