ಬೀಜಿಂಗ್: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಚೀನಾ ಆಸಕ್ತಿ ತೋರಿದೆ ಎಂದು ಆಡಳಿತಾರೂಢ ಕಮ್ಯೂನಿಸ್ಟ್ ಪಕ್ಷದ ಪತ್ರಿಕೆ ಗ್ಲೋಬಲ್ ಟೈಮ್ಸ್‌ನಲ್ಲಿ ಪ್ರಕಟವಾದ ಲೇಖನದಲ್ಲಿ ಉಲ್ಲೇಖಿಸಲಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್ ಹಾದುಹೋಗಲಿರುವುದೇ ಚೀನಾದ ಈ ಆಸಕ್ತಿಗೆ ಕಾರಣ ಎನ್ನಲಾಗಿದೆ. ಈ ಯೋಜನೆಗೆ ಚೀನಾ ಹೂಡಿಕೆ ಮಾಡುತ್ತಿದೆ. ಸುಮಾರು ₹ 3.2 ಲಕ್ಷ ಕೋಟಿ ಮೊತ್ತದ ಯೋಜನೆ ಇದಾಗಿದೆ.

ರೊಹಿಂಗ್ಯಾ ವಿವಾದಕ್ಕೆ ಸಂಬಂಧಿಸಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ನಡುವೆ ಚೀನಾ ಮಧ್ಯಸ್ಥಿಕೆ ವಹಿಸಿರುವುದನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, 'ಇತರ ದೇಶಗಳ ಆಂತರಿಕ ವಿಚಾರದಲ್ಲಿ ಮಧ್ಯಪ್ರವೇಶಿಸದಿರಲು ಚೀನಾ ಬದ್ಧವಾಗಿದೆ. ಹಾಗೆಂದು, ಸಾಗರೋತ್ತರ ಹೂಡಿಕೆ ಮಾಡುವ ಉದ್ಯಮಿಗಳ ಬೇಡಿಕೆಗಳ ವಿಚಾರದಲ್ಲಿ ಸುಮ್ಮನಿರಲಾಗದು’ ಎಂದೂ ಹೇಳಲಾಗಿದೆ.

‘ಬೃಹತ್ ಪ್ರಮಾಣದ ಹೂಡಿಕೆಗಳನ್ನು ಮಾಡುವ ಮೂಲಕ ವಿವಿಧ ದೇಶಗಳ ಜತೆ ಚೀನಾ ರಸ್ತೆ ಸಂಪರ್ಕ ಸಾಧಿಸಿದೆ. ಕಾಶ್ಮೀರ ವಿಚಾರವೂ ಸೇರಿದಂತೆ ಪ್ರಾದೇಶಿಕ ಸಂಘರ್ಷಗಳನ್ನು ಕೊನೆಗಾಣಿಸುವ ಬಗ್ಗೆಯೂ ಚೀನಾವೀಗ ಆಸಕ್ತಿವಹಿಸಿದೆ’ ಎಂದು ಲೇಖನದಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.