ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುರಾನ್‌ಗೆ ಅವಮಾನ: ಪ್ರತಿಭಟನೆ ತೀವ್ರ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕಾಬೂಲ್ (ಎಎಫ್‌ಪಿ): ನ್ಯಾಟೊ ಸೈನಿಕರು ಪವಿತ್ರ ಕುರಾನ್ ಸುಟ್ಟು ಹಾಕಿರುವ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ನೂರಾರು ಆಪ್ಘನ್ ನಾಗರಿಕರು ಬುಧವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಕಾಬೂಲ್‌ನಲ್ಲಿ ಅಮೆರಿಕ ಸೇನಾ ನೆಲೆಯತ್ತ ಧಾವಿಸಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರು ಕಲ್ಲು ತೂರಿದರು. ತಡೆಯಲು ಬಂದ ಪೊಲೀಸರ ಮೇಲೂ ದಾಳಿ ನಡೆಸಿದರು. ಈ ಘಟನೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಜಲಾಲಾಬಾದ್‌ನಲ್ಲಿ 1000ಕ್ಕೂ ಹೆಚ್ಚು ಮಂದಿ ಹೆದ್ದಾರಿ ತಡೆ ನಡೆಸಿ, `ಅಮೆರಿಕ ಸಾಯಲಿ~, `ಒಬಾಮ ಸಾಯಲಿ~ ಎಂದು ಕೂಗಿದರು.

ಖಂಡನೆ: ಆಫ್ಘಾನಿಸ್ತಾನದಲ್ಲಿ ಅಮೆರಿಕ ನೇತೃತ್ವದ ಅಂತರರಾಷ್ಟ್ರೀಯ ಪಡೆಗಳು ಕುರಾನ್ ಮತ್ತಿತರ ಧಾರ್ಮಿಕ ಗ್ರಂಥಗಳನ್ನು ಸುಟ್ಟುಹಾಕಿರುವುದು ಒಂದು ದುರದೃಷ್ಟಕರ ಘಟನೆ ಎಂದು ವಿಶ್ವಸಂಸ್ಥೆ ಹೇಳಿದೆ. ಈ ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ವಿಶ್ವಾಸವನ್ನು ಅದು ವ್ಯಕ್ತಪಡಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT