ವಾಷಿಂಗ್ಟನ್: ವರ್ಜೀನಿಯಾದ ಅಲೆಕ್ಸಾಂಡ್ರಿಯಾದಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ರಿಪಬ್ಲಿಕನ್ ಪಕ್ಷದ ಹಿರಿಯ ಸಂಸದ ಸ್ಟೀವ್ ಸ್ಕಲೀಸ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಸಂಸದರ ನಡುವಣ ವಾರ್ಷಿಕ ಬೇಸ್ಬಾಲ್ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದೆ.
ಈ ಬಗ್ಗೆ ರಿಪಬ್ಲಿಕನ್ ಪಕ್ಷದ ಮತ್ತೊಬ್ಬ ಸಂಸದ ಮೊ ಬ್ರೂಕ್ಸ್ ಅವರು ಸಿಎನ್ಎನ್ ಸುದ್ದಿವಾಹಿನಿಗೆ ಮಾಹಿತಿ ನೀಡಿದ್ದು, ಕನಿಷ್ಠ ಇಬ್ಬರು ಅಧಿಕಾರಿಗಳು ಮತ್ತು ಸಂಸತ್ನ ಒಬ್ಬ ಸಿಬ್ಬಂದಿ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ. ದಾಳಿಕೋರ ಮಧ್ಯವಯಸ್ಸಿನ ಬಿಳಿಯ ವ್ಯಕ್ತಿ ಎಂದು ಅವರು ತಿಳಿಸಿದ್ದಾರೆ.
ಈ ಮಧ್ಯೆ, ವರ್ಜಿನಿಯಾ ಪೊಲೀಸರು ದಾಳಿಕೋರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.