ಕಠ್ಮಂಡು(ಐಎಎನ್ ಎಸ್): ನೇಪಾಳದಲ್ಲಿ ಭೂಕಂಪ ಸಂತ್ರಸ್ತರ ನೆರವಿಗೆ ಕಾರ್ಯಾಚರಣೆ ನಡೆಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಮಂಗಳವಾರ ಅಪಘಾತಕ್ಕೀಡಾಗಿ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಬಾಲಿಪಾಯಿಯಿಂದ 75 ಕಿ.ಮೀ. ದೂರದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ನೇಪಾಳ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಭೂಕಂಪ ಸಂತ್ರಸ್ತರ ನೆರವಿಗೆ ಕಾರ್ಯಾಚಾರಣೆ ನಡೆಸುತ್ತಿದ್ದ ಹೆಲಿಕಾಪ್ಟರ್ ಕಠ್ಮಂಡುವಿನಿಂದ ಸಿಂಧ್ ಪೌಲ್ ಚೌಕಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.