ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಕೆಲ ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ 19 ಮಂದಿ ಮೃತಪಟ್ಟು, 42ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಇಲ್ಲಿನ ಖೈಬರ್ ಫಕ್ತುಂಖ್ವಾ, ಗಿಲ್ಗಿಟ್ ಬಲ್ಟಿಸ್ತಾನ್, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಸೇರಿದಂತೆ ಕೆಲ ಬುಡಕಟ್ಟು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ ಹೆಚ್ಚಿನ ಪ್ರಮಾಣದ ಆಸ್ತಿ- ಪಾಸ್ತಿಗೆ ಹಾನಿಯಾಗಿದೆ.

ಪಂಜಾಬ್ನಲ್ಲಿ ಆರು ಮಂದಿ ಹಾಗೂ ಇತರೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 13 ಮಂದಿ ಮೃತಪಟ್ಟು, 34 ಜನ ಗಾಯಗೊಂಡಿರುವುದಾಗಿ `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್' ವರದಿ ಮಾಡಿದೆ.

ಇಲ್ಲಿನ ವಾರ್ಸಾಕ್ ಅಣೆಕಟ್ಟಿನಿಂದಶನಿವಾರ 50 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗಿದ್ದು, ಇದರಿಂದಾಗಿ ನೌಶೆರಾ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರಾಲ್, ಸ್ವಾತ್ ಕಣಿವೆ, ಪೆಶಾವರ, ಕೋಹಿಸ್ತಾನ್ ಸೇರಿದಂತೆ ಖೈಬರ್ ಫಕ್ತುಂಖ್ವಾ ಪ್ರಾಂತ್ಯದ ಏಳು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, ಈ ಸ್ಥಳಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.

ಪ್ರವಾಹ ಸ್ಥಳಗಳಿಗೆ ಆಹಾರ ಮತ್ತು ನೀರು ಸರಬರಾಜು ಮಾಡಲಾಗಿದೆ. ಸಂವಹನಕ್ಕೆ ತೊಂದರೆಯಾಗಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ ಎಂದು ಪಿಡಿಎಂಎ ನಿರ್ದೇಶಕರು ತಿಳಿಸಿದ್ದಾರೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.