ಅಮೆರಿಕ ರಾಯಭಾರಿ ನ್ಯಾನ್ಸಿ ಪೋವೆಲ್ ಅವರ ದಿಢೀರ್ ರಾಜೀನಾಮೆ ಭಾರತ ಮತ್ತು ಅಮೆರಿಕ ನಡುವೆ ಉಂಟಾಗಿರುವ ರಾಜತಾಂತ್ರಿಕ ಭಿನ್ನಾಬಿಪ್ರಾಯಕ್ಕೆ ತೆಪೆ ಹಾಕುವ ಪ್ರಯತ್ನ ಎಂದು ಬಿಂಬಿಸಬೇಕಾಗಿಲ್ಲ ಎಂದು ಅಮೆರಿಕ ಮಂಗಳವಾರ ಸ್ಪಷ್ಟಪಡಿಸಿದೆ.

ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೋಮವಾರ ದಿಢೀರ್ ರಾಜೀನಾಮೆ ನೀಡಿದ್ದರು. ಈ ಬೆಳವಣಿಗೆಯಿಂದ ದೇವಯಾನಿ ಪ್ರಕರಣದಲ್ಲಿ ಉಂಟಾಗಿದ್ದ ಉಭಯ ದೇಶಗಳ ನಡುವಿನ ವೈಮನಸ್ಸನ್ನು ಶಮನಗೊಳಿಸಲು ಅಮೆರಿಕ ಈ ಕ್ರಮ ಕೈಗೊಂಡಿದೆ ಎಂದೇ ಮಾಧ್ಯಮಗಳು ವರದಿ ಮಾಡಿದ್ದವು.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಅಮೆರಿಕ ಮತ್ತು ಭಾರತದ ನಡುವೆ ಯಾವುದೇ ವೈಮನಸ್ಸು ಉಂಟಾಗಿಲ್ಲ. ಪೋವೆಲ್ ರಾಜೀನಾಮೆ ವಿಚಾರ ಫೆಡರಲ್ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.