ಢಾಕಾ (ಪಿಟಿಐ): ಜಮಾತೆ ಇಸ್ಲಾಮಿ ಮುಖಂಡ ಅಬ್ದುಲ್ ಖಾದರ್ ಮುಲ್ಲಾನನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಈವರೆಗೂ 25 ಜನರು ಸಾವನ್ನಪ್ಪಿದ್ದಾರೆ.

ಭಾನುವಾರ ನಡೆದ ದಂಗೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ದಂಗೆ ಎಬ್ಬಿಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಶೇಕ್ ಹಸೀನಾ ಹೇಳಿದ್ದಾರೆ.

ಅವಾಮಿ ಲೀಗ್ ಪಕ್ಷದ ಬೆಂಬಲಿಗನೊಬ್ಬನನ್ನು ಜಮಾತೆ ಪಕ್ಷದ ಕಾರ್ಯಕರ್ತರು ಇರಿದು ಕೊಂದಿದ್ದಾರೆ. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಲಲ್ಮೋನಿರ್ಹಟ್ ಜಿಲ್ಲೆಯಲ್ಲಿ ಪೊಲೀಸರ ಜತೆ ನಡೆದ ಸಂಘರ್ಷದಲ್ಲಿ ಮೂವರು ಜಮಾತೆ ಪಕ್ಷದ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ಜಿಲ್ಲೆಯ ಕಾಫಿರ್ ಬಜಾರ್‌ನಲ್ಲಿರುವ ಅಲ್ಪ ಸಂಖ್ಯಾತ ಹಿಂದೂ ಸಮುದಾಯದವರ ಮನೆಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿದ ಪರಿಣಾಮ 10 ಜನರು ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.