ಜೋಹಾನ್ಸಬರ್ಗ್ (ಪಿಟಿಐ): ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ತೀವ್ರ ಕ್ಷೀಣಿಸಿದ್ದರಿಂದ ಶನಿವಾರ ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

`94 ವರ್ಷದ ಮಂಡೇಲಾ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ' ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.`ಶುಕ್ರವಾರ ತಡರಾತ್ರಿ 1.30ಕ್ಕೆ ಮಂಡೇಲಾ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಪ್ರಿಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ದಕ್ಷಿಣ ಆಫ್ರಿಕಾ ಅಧ್ಯಕ್ಷ ಜಾಕೋಬ್ ಜುಮಾ ಅವರ ವಕ್ತಾರ ಮ್ಯಾಕ್ ಮಹಾರಾಜ್ ತಿಳಿಸಿದ್ದಾರೆ.

ಮಂಡೇಲಾ ಅವರು ಶ್ವಾಸಕೋಶ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದಾರೆ. ಏಳು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಅವರು ಈ ಸಮಸ್ಯೆಗೆ ಒಳಗಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಸೋಂಕಿನ ತೊಂದರೆಗೆ ಒಳಗಾಗಿರುವ ಅವರು, ಒಂಬತ್ತು ದಿನಗಳ ಚಿಕಿತ್ಸೆಗಳ ಬಳಿಕ ಏಪ್ರಿಲ್ 6ರಂದು ಪ್ರಿಟೋರಿಯಾ ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು.

ಈಗ ಅದೇ ಸಮಸ್ಯೆ ಕಾಣಿಸಿಕೊಂಡಿದೆ. ಮಂಡೇಲಾ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ನೀಡಲು ರಾಷ್ಟ್ರೀಯ, ಅಂತರರಾಷ್ಟ್ರೀಯ ಸುದ್ದಿ ವಾಹಿನಿಗಳು, ವರದಿಗಾರರು ಆಸ್ಪತ್ರೆ ಬಳಿ ಬೀಡು ಬಿಟ್ಟಿದ್ದಾರೆ.ಮಂಡೇಲಾ ಆರೋಗ್ಯದ ಕುರಿತು ಸರ್ಕಾರ ಮಾಹಿತಿ ನೀಡುತ್ತಿಲ್ಲ ಎಂದು ಮಾಧ್ಯಮಗಳು ಆರೋಪಿಸಿದ ಬಳಿಕ ಸರ್ಕಾರ ಇದೀಗ ಕಾಲಕಾಲಕ್ಕೆ ಪ್ರಕಟಣೆ ಹೊರಡಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.