ಜೆರುಸಲೇಂ/ಲಂಡನ್ (ಪಿಟಿಐ): ಭಾರಿ ಒತ್ತಡದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಸ್ಥ ಮಹಿಳೆಯರಿಗೆ ಕೆಲಸಕ್ಕೆ ತಕ್ಕ ವೇತನ ದೊರೆಯುತ್ತಿಲ್ಲ!

ಕಡಿಮೆ ಸಂಬಳ ಮತ್ತು ಭಾರಿ ಒತ್ತಡ ಗಳ ಮಧ್ಯೆ ಹೆಚ್ಚು ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಬಡ್ತಿ ಅವಕಾಶ ಕೂಡ ಕಡಿಮೆ ಎಂಬ ಅಂಶವನ್ನು ಅಧ್ಯಯನ ವರದಿ ಬಹಿರಂಗಪಡಿಸಿದೆ.

ಇಸ್ರೇಲ್ನ ಟೆಲ್ ಅವಿವ್ ವಿಶ್ವವಿದ್ಯಾಲಯ ಮತ್ತು ಹೈಫಾ ವಿಶ್ವವಿದ್ಯಾಲಯದ ಅಧ್ಯಾಪಕರು 27 ದೇಶಗಳ ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕುರಿತು ಕೈಗೊಂಡ ಅಧ್ಯಯನ ವರದಿಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಈ ನಿರ್ಧಾರಕ್ಕೆ ಬರುವ ಸಂಶೋಧಕರು 27 ದೇಶಗಳ ೯,೦೦೦ ಉದ್ಯೋಗಸ್ಥ ಮಹಿಳೆಯರು ಮತ್ತು 8,500 ಪುರುಷರ ಸಮೀಕ್ಷೆ ನಡೆಸಿದ್ದಾರೆ. ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರಿಗೆ ನೀಡುವ ಸೌಲಭ್ಯ, ವಾತಾವರಣ ಕೂಡ ಹೇಳಿಕೊಳ್ಳುವ ರೀತಿ ಇಲ್ಲ. ಪುರುಷರು ಅನುಭವಿಸುವ ಸೌಲಭ್ಯ ಬಳಸಿಕೊಳ್ಳಲು ಮಹಿಳೆಗೆ ಸಾಧ್ಯವಾಗಿಲ್ಲ . ಅಮೆರಿಕ, ಆಸ್ಟ್ರೇಲಿಯಾ, ಫ್ರಾನ್ಸ್, ಜಪಾನ್, ರಷ್ಯಾ ಸೇರಿ 27 ದೇಶಗಳ ಮಹಿಳೆಯರು ಮತ್ತು ಪುರುಷರ ಅಭಿಪ್ರಾಯ ಪಡೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.