ವಿಶ್ವಸಂಸ್ಥೆ (ಪಿಟಿಐ): ವಿಶ್ವಸಂಸ್ಥೆ ಮಹಾಸಭೆಯ 68ನೇ ಅಧಿವೇಶನದ ಅಧ್ಯಕ್ಷರಾಗಿ ಆ್ಯಂಟಿಗುವಾ ಹಾಗೂ ಬರ್ಬುಡಾ ರಾಯಭಾರಿ ಜಾನ್ ಡಬ್ಲ್ಯು ಆಶೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

`18 ತಿಂಗಳ ನನ್ನ ಅಧಿಕಾರವಧಿಯಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹಾಸಭೆಯಲ್ಲಿ ಕೈಗೊಳ್ಳುವ ಕಾರ್ಯಸೂಚಿಗಳನ್ನು ಸಮರ್ಥವಾಗಿ ಜಾರಿಗೊಳಿಸುತ್ತೇನೆ. ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುತ್ತೇನೆ' ಎಂದು ಅವರು ಅಧಿಕಾರ ವಹಿಸಿಕೊಂಡ ಬಳಿಕ ಭರವಸೆ ನೀಡಿದರು.

`ಯೋಜನೆಗಳ ಜಾರಿಗೆ ಎಲ್ಲಾ ರಾಷ್ಟ್ರಗಳ ವಿಶ್ವಾಸ, ಸಹಕಾರ ಅಗತ್ಯ. ಸೋಲು ಎಲ್ಲದಕ್ಕೂ ಅಂತ್ಯವಲ್ಲ. ನಾವೂ ಸಮರ್ಥರೆಂದು ತೋರಿಸುವ ಅಗತ್ಯವಿದೆ. ಅದನ್ನು ನಮ್ಮ ಕಾರ್ಯದ ಮೂಲಕ ಸಾಕಾರಗೊಳಿಸಬೇಕು' ಎಂದು ಅವರು ಕರೆ ನೀಡಿದರು.

`ಸಹಸ್ರಮಾನದ ಅಭಿವೃದ್ಧಿ ಗುರಿಗಳನ್ನು (ಎಂಡಿಜಿ) ಕಾರ್ಯಗತಗೊಳಿಸುವಲ್ಲಿ ಈಗಾಗಲೇ ಸಾಕಷ್ಟು ಪಾಠ ಕಲಿತಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸಿ ಕಾರ್ಯಗತಗೊಳಿಸುವುದೇ ಮುಖ್ಯ ಗುರಿ' ಎಂದರು.

ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಆಶೆ ಅವರಿಗೆ ಅಭಿನಂದನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.