ಕಲಬುರ್ಗಿ: ‘ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸಲಾಗುವುದು. ಎನ್‌ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಈಗ ಏನನ್ನೂ ಹೇಳುವುದಿಲ್ಲ. ಮುಂದಿನ ಒಂದು ವರ್ಷದ ಒಳಗಾಗಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಶಿಕ್ಷಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಶಿಕ್ಷಕರ ವರ್ಗಾವಣೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗೊತ್ತಿಗೆ. ನಾನು ಶಿಕ್ಷಣ ಸಚಿವನಾದರೆ ವರ್ಗಾವಣೆ ಸಮಸ್ಯೆಯನ್ನು ಪರಿಹರಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಪ್ರೌಢಶಿಕ್ಷಣದಲ್ಲಿ ದೈಹಿಕ ಶಿಕ್ಷಣ ಪಠ್ಯವನ್ನು ಸೇರಿಸಬೇಕಾಗಿತ್ತು. ಈ ಹಿಂದೆ ಇದ್ದ ಶಿಕ್ಷಣ ಸಚಿವರು ಆ ನಿಟ್ಟಿನಲ್ಲಿ ಏನೂ ಮಾಡಿಲ್ಲ’ ಎಂದರು.

‘ನೆಮ್ಮದಿಯ ವಾತಾವರಣ’

‘ಶಿಕ್ಷಕರು ನೆಮ್ಮದಿಯಿಂದ ಬೋಧನೆ ಮಾಡುವ ವಾತಾವರಣ ನಿರ್ಮಾಣ ಆಗಬೇಕು. ಆ ನಿಟ್ಟಿನಲ್ಲಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ, ಶಿಕ್ಷಕರ ಸಮಸ್ಯೆ ಪರಿಹರಿಸಲಾಗುವುದು’ ಎಂದು ಬಸವರಾಜ ಹೊರಟ್ಟಿ ಹೇಳಿದರು.

‘ಶಿಕ್ಷಕರು ವರ್ಗಾವಣೆ, ವೇತನ ಇನ್ನಿತರ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸದೆ ಗುಣಮಟ್ಟದ ಬೋಧನೆಗೆ ಹೆಚ್ಚು ಒತ್ತು ನೀಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.