ಕೊಲಂಬೊ: ಕೋಮು ಗಲಭೆ ನಿಯಂತ್ರಿಸುವ ಸಲುವಾಗಿ ಘೋಷಿಸಿದ್ದ ತುರ್ತುಪರಿಸ್ಥಿತಿಯನ್ನು ವಿಸ್ತರಿಸುವುದಿಲ್ಲ ಎಂದು ಸಚಿವ ರಂಜಿತ್ ಮದ್ದುಮ ಬಂಡಾರ ಹೇಳಿದ್ದಾರೆ. ತುರ್ತು ಪರಿಸ್ಥಿತಿ ಘೋಷಣೆ ನಂತರ ರಾಷ್ಟ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

‘ಸದ್ಯ, ರಾಷ್ಟ್ರ ಸಹಜ ಸ್ಥಿತಿಗೆ ಮರಳುತ್ತಿದೆ. ಹಾಗಾಗಿ, ಗುರುವಾರ (ಮಾರ್ಚ್ 15) ಕೊನೆಗೊಳ್ಳುವ ತುರ್ತು ಪರಿಸ್ಥಿತಿಯ ವಿಸ್ತರಣೆ ಅಗತ್ಯವಿಲ್ಲ. ಆದರೂ, ಭದ್ರತಾ ಸ್ಥಿತಿಯ ಕುರಿತು ಅವಲೋಕನ ನಡೆಸಲು ಐಜಿಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

‘ಫೇಸ್‌ಬುಕ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳ ಮೇಲೆ ಹೇರಿರುವ ತಾತ್ಕಾಲಿಕ ನಿಷೇಧ ಹಿಂಪಡೆಯುವ ಬಗ್ಗೆ ಕೂಡ ಪೊಲೀಸರೊಂದಿಗೆ ಮಾತನಾಡಿದ್ದೇನೆ. ಜಪಾನ್‌ಗೆ ಭೇಟಿ ನೀಡಿರುವ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ವಾಪಸಾದ ನಂತರ ಈ ಎಲ್ಲ ವಿಷಯಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.