ಭಾರತಕ್ಕೆ ಟ್ರಂಪ್ ಭೇಟಿ ಇನ್ನೂ ನಿರ್ಧಾರವಾಗಿಲ್ಲ: ಶ್ವೇತಭವನ

7

ಭಾರತಕ್ಕೆ ಟ್ರಂಪ್ ಭೇಟಿ ಇನ್ನೂ ನಿರ್ಧಾರವಾಗಿಲ್ಲ: ಶ್ವೇತಭವನ

Published:
Updated:

ವಾಷಿಂಗ್ಟನ್‌: ‘ಭಾರತಕ್ಕೆ ಭೇಟಿ ನೀಡುವಂತೆ ನವದೆಹಲಿಯಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಆಹ್ವಾನ ಬಂದಿದೆ.  ಆದರೆ ಈ ಕುರಿತಂತೆ ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಮಂಗಳವಾರ ಶ್ವೇತಭವನ ಸ್ಪಷ್ಟಪಡಿಸಿದೆ.

‘ನನಗೆ ತಿಳಿದ ಪ್ರಕಾರ ಆಹ್ವಾನವು ತಲುಪಿದ್ದು, ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್‌ ತಿಳಿಸಿದರು. 2019ರಲ್ಲಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸು
ವಂತೆ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !