ಮಾಯಾ–ಸೋನಿಯಾ ಭೇಟಿ ಇಲ್ಲ: ಬಿಎಸ್‌ಪಿ ಸ್ಪಷ್ಟನೆ

ಸೋಮವಾರ, ಜೂನ್ 17, 2019
28 °C

ಮಾಯಾ–ಸೋನಿಯಾ ಭೇಟಿ ಇಲ್ಲ: ಬಿಎಸ್‌ಪಿ ಸ್ಪಷ್ಟನೆ

Published:
Updated:

ದೆಹಲಿ: ಬಹುಜನ ಸಮಾಜ ಪಕ್ಷದ ವರಿಷ್ಠರಾದ ಮಾಯಾವತಿ ವಿಪಕ್ಷ ನಾಯಕರೊಂದಿಗೆ ಸೋಮವಾರ ಯಾವುದೇ ಸಭೆ ನಡೆಸುತ್ತಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ.

ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಜತೆ ಇಂದು ಸಭೆ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಸಂಗತಿ ಭಾನುವಾರ ರಾಷ್ಟ್ರ ರಾಜಕಾರಣದಲ್ಲಿ ಸಂಚಲನಕ್ಕೂ ಕಾರಣವಾಗಿತ್ತು. ಆದರೆ, ಇದೀಗ ಬಿಎಸ್‌ಪಿಯೇ ಸಂಭಾವ್ಯ ಭೇಟಿಯನ್ನು ಅಲ್ಲಗೆಳೆದಿದೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ಜತೆ ಮಾತನಾಡಿರುವ ಬಿಎಸ್‌ಪಿಯ ಹಿರಿಯ ನಾಯಕ ಸತೀಶ್‌ ಚಂದ್ರ ಮಿಶ್ರಾ, ‘ಮಾಯಾವತಿ ಅವರು ಸೋಮವಾರ ದೆಹಲಿಯಲ್ಲಿ ಯಾವುದೇ ಸಭೆ, ಸಮಾರಂಭದ ವೇಳಾಪಟ್ಟಿಯನ್ನು ಹೊಂದಿಲ್ಲ,’ ಎಂದು ಹೇಳಿದ್ದಾರೆ.

ಅತಂತ್ರ ಲೋಕಸಭೆಯ ಸನ್ನಿವೇಶವೇನಾದರೂ ಸೃಷ್ಟಿಯಾದರೆ ಮುಂದೇನು ಮಾಡಬೇಕು ಎಂಬುದರ ಕುರಿತು ಚರ್ಚಿಸಲು ಇಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ಬಿಎಸ್‌ಪಿ ನಾಯಕಿ ಮಾಯಾವತಿ ಭೇಟಿಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದಕ್ಕೂ ಹಿಂದೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಮಾಯಾವತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 6

    Happy
  • 0

    Amused
  • 1

    Sad
  • 0

    Frustrated
  • 2

    Angry

Comments:

0 comments

Write the first review for this !