ಉಕ್ಕಿನ ಮೇಲ್ಸೇತುವೆಗೆ ‍ಪರಿಸರ ಇಲಾಖೆ ಅನುಮತಿ ಸಿಕ್ಕಿಲ್ಲ: ಹೈಕೋರ್ಟ್‌

7

ಉಕ್ಕಿನ ಮೇಲ್ಸೇತುವೆಗೆ ‍ಪರಿಸರ ಇಲಾಖೆ ಅನುಮತಿ ಸಿಕ್ಕಿಲ್ಲ: ಹೈಕೋರ್ಟ್‌

Published:
Updated:

ಬೆಂಗಳೂರು: ‘ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಪರಿಸರ ಇಲಾಖೆ ಅನುಮತಿಗೆ ಇನ್ನೂ ಮನವಿ ಸಲ್ಲಿಸಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ನಗರದ ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕ್ರಮವನ್ನು ಪ್ರಶ್ನಿಸಿ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಈ ಮೊದಲು ರೂಪಿಸಲಾಗಿದ್ದ ಯೋಜನೆಯನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ, ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪೀಠವು 2017ರ ಮಾರ್ಚ್‌ 13ರಂದು ತಡೆ ನೀಡಿದೆ’ ಎಂದರು. ಈ ಕುರಿತ ಮಧ್ಯಂತರ ತಡೆ ಆದೇಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಮತ್ತು ಬಿಡಿಎ ಪರ ವಕೀಲರು, ‘ನ್ಯಾಯಮಂಡಳಿಯ ಈ ಆದೇಶವನ್ನು ಇನ್ನೂ ಪ್ರಶ್ನಿಸಿಲ್ಲ. ಅಂತೆಯೇ ಪ್ರಸ್ತಾವಿತ ಹೊಸ ಯೋಜನೆಗೆ ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದಿಂದ ಇನ್ನೂ ನಿರಾಕ್ಷೇಪಣೆ ಸಿಕ್ಕಿಲ್ಲ’ ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು 2019ರ ಜೂನ್‌ಗೆ ಮುಂದೂಡಿದೆ.

***
ಪ್ರಸ್ತಾಪಿತ ಉಕ್ಕಿನ ಮೇಲ್ಸೇತುವೆ ಯೋಜನೆಗೆ ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದ ನಿರಾಕ್ಷೇಪಣೆ ಪಡೆಯುವಂತೆ ಕೋರ್ಟ್‌ ಸೂಚಿಸಿರುವುದು ಸ್ವಾಗತಾರ್ಹ.
-ಜಿ. ಪರಮೇಶ್ವರ, ಉಪ ಮುಖ್ಯಮಂತ್ರಿ

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !