ಬುಧವಾರ, ಸೆಪ್ಟೆಂಬರ್ 29, 2021
21 °C

ಸಿಂದಗಿ: ಮಹಿಳೆಗೆ ಥಳಿತ; ಐವರ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂದಗಿ (ವಿಜಯಪುರ): ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಬ್ಬರನ್ನು ಮೂವರು ಮುಸ್ಲಿಂ ಮಹಿಳೆಯರು ತಾಲ್ಲೂಕಿನ ಗಣಿಹಾರ ಗ್ರಾಮದಲ್ಲಿ ಬುಧವಾರ ಎಳೆದಾಡಿ ಥಳಿಸಿದ್ದು, ಹಲ್ಲೆಗೆ ಸಂಬಂಧಿಸಿದಂತೆ ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

‘ನನ್ನ ಮನೆಗೆ ಹೋಗುವ ದಾರಿಯಲ್ಲಿ ಮುಳ್ಳು ಕಂಟಿ ಹಚ್ಚಿದ್ದರಿಂದ ಅದನ್ನು ತೆಗೆದು ಹಾಕಿದ್ದಕ್ಕೆ ನನ್ನ ಜೊತೆ ಜಗಳಕ್ಕೆ ಬಂದ ಮಹಿಳೆಯರು ಜಾತಿ ನಿಂದನೆ ಮಾಡಿ ಹೊಡೆದು, ಕಾಲಿನಿಂದ ಒದ್ದಿದ್ದಾರೆ. ಬಳಿಕ ಜೀವ ಬೆದರಿಕೆ ಕೂಡ ಹಾಕಿದ್ದಾರೆ’ ಎಂದು ಥಳಿತಕ್ಕೊಳಗಾದ ಶರಣಮ್ಮ ಯಮನಪ್ಪ ಬಂದಾಳ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಶಹಾಜಾಬಬಿ ಗೋಟ್ಯಾಳ, ಕರಿಷ್ಮಾ ಗೋಟ್ಯಾಳ, ಬಸೀರಾ ಗೋಟ್ಯಾಳ, ಜಬಿನಾ ಮೊಮೀನ್ ಹಾಗೂ ಅಸ್ಲಂ ಗೋಟ್ಯಾಳ ಎಂಬುವವರ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಹಿಳೆಯನ್ನು ಥಳಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು