ನಗರಸಭೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

7

ನಗರಸಭೆ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

Published:
Updated:

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಗಳಿಗೆ ನಡೆಯಲಿರುವ ಚುನಾವಣಾ ಸಂಬಂಧ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಆರಂಭವಾಗಲಿದೆ.

ಆಗಸ್ಟ್‌ 17ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಆದರೆ, ಆಗಸ್ಟ್‌ 11ರ ಭಾನುವಾರ ಮತ್ತು 15ರಂದು (ಬುಧವಾರ) ರಜೆ ಇರುವುದರಿಂದ ಅಂದು ನಾಮಪತ್ರ ಸಲ್ಲಿಸಲು ಅವಕಾಶ ಇರುವುದಿಲ್ಲ.

ಸೂಚನೆ: ಈ ಮಧ್ಯೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯ ದಿನಾಚರಣೆಯಂತಹ ರಾಷ್ಟ್ರೀಯ ಹಬ್ಬ ಹಾಗೂ ನಾಡಹಬ್ಬಗಳನ್ನು ಆಚರಿಸಲು ನೀತಿಸಂಹಿತೆ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರೆ, ಆಚರಣೆ ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳು, ಶಾಸಕರು, ಮಂತ್ರಿಗಳು ನೀತಿಸಂಹಿತೆಗೆ ಬಾಧಕವಾಗುವ ರೀತಿಯಲ್ಲಿ, ಪಟ್ಟಣ ನಗರ ಪ್ರದೇಶದ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ, ಆಶ್ವಾಸನೆ ಇತ್ಯಾದಿಗಳನ್ನು ನೀಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಹೀಗಾಗಿ, ಅಧಿಕಾರಿಗಳು ಗಮನ ಹರಿಸಿ ನೀತಿಸಂಹಿತೆ ಉಲ್ಲಂಘನೆಯಾದಂತೆ ಕಾರ್ಯಕ್ರಮ ನಡೆಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !