ಚುನಾವಣೆ ಕರ್ತವ್ಯದಲ್ಲಿ ಲೋಪ: 62 ಸಿಬ್ಬಂದಿಗೆ ನೋಟಿಸ್

ಭಾನುವಾರ, ಮೇ 26, 2019
27 °C

ಚುನಾವಣೆ ಕರ್ತವ್ಯದಲ್ಲಿ ಲೋಪ: 62 ಸಿಬ್ಬಂದಿಗೆ ನೋಟಿಸ್

Published:
Updated:

ವಿಜಯಪುರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ವಿವಿಧ ಮತಗಟ್ಟೆಗಳಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ 62 ಸಿಬ್ಬಂದಿ, ತರಬೇತಿಗೆ ಗೈರು ಹಾಜರಾಗಿ ಕರ್ತವ್ಯಲೋಪ ಎಸಗಿದ್ದರಿಂದ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.

ಚುನಾವಣೆಯ ಕೆಲಸವನ್ನು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗುವಂತೆ ಏ.16, 17ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ತರಬೇತಿ ಆಯೋಜಿಸಲಾಗಿತ್ತು. ಇದಕ್ಕೆ 62 ಸಿಬ್ಬಂದಿ ಗೈರಾಗಿದ್ದರಿಂದ ಈ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿಗೆ ಗೈರಾಗಿ, ಚುನಾವಣೆಯಂಥಹ ಮಹತ್ವದ ಕಾರ್ಯದಲ್ಲಿ ಕರ್ತವ್ಯ ಚ್ಯುತಿ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇವರ ಮೇಲೆ ಶಿಸ್ತು ಕ್ರಮ ಏಕೆ ಜರುಗಿಸಬಾರದು ಎಂಬುದಕ್ಕೆ ನೋಟಿಸ್ ತಲುಪಿದ 12 ಗಂಟೆಯೊಳಗಾಗಿ, ಲಿಖಿತ ಹೇಳಿಕೆಯನ್ನು ಖುದ್ದಾಗಿ ಹಾಜರಾಗಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !