ತನಿಖೆಗೆ ಸೂಚನೆ: ಎಂ.ಬಿ.ಪಾಟೀಲ

ಶುಕ್ರವಾರ, ಏಪ್ರಿಲ್ 19, 2019
22 °C

ತನಿಖೆಗೆ ಸೂಚನೆ: ಎಂ.ಬಿ.ಪಾಟೀಲ

Published:
Updated:

ವಿಜಯಪುರ: ‘ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಪಾಕ್‌ ಪರ ಒಲವುಳ್ಳ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುತ್ತಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸುವಂತೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

‘ಕಾಲೇಜು ಸಹ ಆಂತರಿಕ ತನಿಖೆಗೆ ಸಮಿತಿ ನೇಮಿಸಿದೆ. ಪರಿಶೀಲನೆ ವೇಳೆ ತಪ್ಪು ಗೋಚರಿಸಿದರೆ ಕ್ರಮ ಜರುಗಿಸಲಾಗುವುದು. ಕಾಲೇಜು ಮುಂಭಾಗ ಕೆಲವರು ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ್ದು ತಪ್ಪು’ ಎಂದು ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷರು ಆಗಿರುವ ಎಂ.ಬಿ.ಪಾಟೀಲ ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !