‘ಹಿಂದುಳಿದವರ ಪರ ಬಿಜೆಪಿ’

ಸೋಮವಾರ, ಮೇ 20, 2019
30 °C

‘ಹಿಂದುಳಿದವರ ಪರ ಬಿಜೆಪಿ’

Published:
Updated:

ವಿಜಯಪುರ: ‘ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ರಚನೆ, ಕುಂಬಾರ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ಸ್ಥಾಪನೆ ಮೂಲಕ ಹಿಂದುಳಿದ ವರ್ಗಗಳ ಪ್ರಗತಿಗೆ ಶ್ರಮಿಸಿದ ಕೀರ್ತಿ ಬಿಜೆಪಿಗೆ ಸಲ್ಲಲಿದೆ’ ಎಂದು ಹಿಂದುಳಿದ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಬಿರಾದಾರ ತಿಳಿಸಿದರು.

‘ಬಿಜೆಪಿ ಹಿಂದುಳಿದವರ ಅಭಿವೃದ್ಧಿಯ ಬದ್ಧತೆ ಹೊಂದಿದೆ. ಇದಕ್ಕಾಗಿ ತನ್ನ ಆಡಳಿತದ ಅವಧಿಯಲ್ಲಿ ಹಲವು ಯೋಜನೆ ಜಾರಿಗೊಳಿಸಿದೆ’ ಎಂದು ಬುಧವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಮಾತನಾಡಿ ‘ಹಿಂದುಳಿದ ವರ್ಗದವರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದು ಕಾಂಗ್ರೆಸ್. ತನ್ನ ನಾಯಕರು, ಮುಖಂಡರ ಕಾಲೇಜುಗಳಿಗೆ ಧಕ್ಕೆಯಾಗಬಾರದು ಎಂದು ದಶಕಗಳ ಕಾಲ ಸರ್ಕಾರಿ ಕಾಲೇಜುಗಳನ್ನೇ ಆರಂಭಿಸಿರಲಿಲ್ಲ’ ಎಂದು ಟೀಕಿಸಿದರು.

ಮೌನೇಶ ಪತ್ತಾರ, ಶಿವಶಂಕರ ಬಡಿಗೇರ, ಸಂತೋಷ ಯಂಕಪ್ಪಗೋಳ, ಸದಾಶಿವ ಬೂಟಾಳೆ, ಸಿದ್ರಾಮ ತೇಲಗಾಂವ, ರಾಜಶೇಖರ ಬಾಗಲಕೋಟ ಪತ್ರಿಕಾಗೋಷ್ಠಿಯಲ್ಲಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !