ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಂಬದಿಂದ ಜಿಗಿದು ಆತ್ಮಹತ್ಯೆಗೆ ಯತ್ನ

Last Updated 16 ಜೂನ್ 2018, 9:08 IST
ಅಕ್ಷರ ಗಾತ್ರ

ಮೈಸೂರು: ನಗರದ ಕೆ.ಆರ್. ವೃತ್ತದಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಹೈಡ್ರಾಮಾ ಬುಧವಾರ ಮಧ್ಯಾಹ್ನ ನಡೆದಿದೆ.

ಆತ್ಮಹತ್ಯೆಗೆ ಮುಂದಾದ ವ್ಯಕ್ತಿಯನ್ನು ಕಾಂತರಾಜ್ ಎಂದು ಗುರುತಿಸಲಾಗಿದ್ದು, ಮಾನಸಿಕ ಅಸ್ವಸ್ಥ ಎನ್ನಲಾಗಿದೆ.

ಮಧ್ಯಾಹ್ನ 1.20ರ ಸಮಯದಲ್ಲಿ ವೃತ್ತದಲ್ಲಿದ್ದ ವಿದ್ಯುತ್ ಕಂಬ ಏರಿದ ಕಾಂತರಾಜ್ ಕೆಳಗೆ ಹಾರಲು ಮುಂದಾಗಿದ್ದಾನೆ. ಸ್ಥಳದಲ್ಲಿ ಇದ್ದ ಸಾರ್ವಜನಿಕರು ದೇವರಾಜ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಕೂಡ ಈತನ ಮನವೋಲಿಸಲು ಮುಂದಾಗಿದ್ದಾರೆ. ಇದಕ್ಕೆ ಯಾವ ಪ್ರತಿಕ್ರಿಯೆ ನೀಡದ ವ್ಯಕ್ತಿ ಕಂಬದ ತುದಿಗೆ ಏರಿ ಹಾರಿದ್ದಾನೆ. ಏಣಿಯ ನೆರವಿನಿಂದ ಕಂಬ ಏರಿದ ಪೊಲೀಸರೊಬ್ಬರು ಈತನನ್ನು ಹಿಡಿದುಕೊಂದಿದ್ದರೆ. ಇದರಿಂದ ಸುಮಾರು ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT