ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯಕ್ಕೆ ಬನ್ನಿ ಆದ್ರೆ... ಮದ್ದೂರು ಕ್ಷೇತ್ರ ಕೇಳಬೇಡಿ!

Last Updated 22 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕಾಡುಕೋಣಗಳ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲಾ ಪಂಚಾಯಿತಿ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ
ವ್ಯಕ್ತಪಡಿಸಿದರು.

‘ಅರಣ್ಯ ಬಿಟ್ಟು ಹೊರಬಾರದಂತೆ ಅರಣ್ಯಾಧಿಕಾರಿಗಳು ಕಾಡುಕೋಣಗಳನ್ನು ಕಾಯಬೇಕು. ಇಲ್ಲವೇ, ಜಮೀನುಗಳಿಗೆ ನುಗ್ಗಿ ಬೆಳೆ ಹಾಳು ಮಾಡುವ ಅವುಗಳನ್ನು ಕೊಲ್ಲಲು ಅನುಮತಿ ನೀಡಬೇಕು. ಆನೆ ಹಾವಳಿ, ಮಂಗಗಳ ಹಾವಳಿ ಮಿತಿ ಮೀರಿದೆ. ಬದುಕು ನಡೆಸುವುದೇ ದುಸ್ತರವಾಗಿದೆ. ಇದಕ್ಕೆ ಸೂಕ್ತ ಪರಿಹಾರ ಹುಡುಕಿಕೊಡಿ. ಇಲ್ಲವೇ, ಇಡೀ ತೀರ್ಥಹಳ್ಳಿ ತಾಲ್ಲೂಕು ಬೇರೆ ಕಡೆ ಸ್ಥಳಾಂತರಿಸಿದರೆನೆಮ್ಮದಿಯ ಜೀವನ ನಡೆಸುತ್ತೇವೆ’ ಎಂದು ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಅವರಲ್ಲಿ ಮನವಿ ಮಾಡಿದರು.

ಅವರ ಅಹವಾಲು ತಾಳ್ಮೆಯಿಂದ ಕೇಳಿದ ಸಚಿವರು, ‘ನಮ್ಮ ಮಂಡ್ಯಕ್ಕೆ ಬಂದು ಬಿಡಿ. ನಮ್ಮದೇ ಜಮೀನು ನೀಡುತ್ತೇನೆ. ಮನೆಯನ್ನೂ ಕೊಡುತ್ತೇವೆ. ಮುಂದಿನ ಚುನಾವಣೆಗೆ ನಿಲ್ಲಲು ಮದ್ದೂರು ವಿಧಾನಸಭಾ ಕ್ಷೇತ್ರ ಮಾತ್ರ ಕೇಳಬೇಡಿ’ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಚಂದ್ರಹಾಸ ಹಿರೇಮಳಲಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT