ಶುಕ್ರವಾರ, ಫೆಬ್ರವರಿ 28, 2020
19 °C
ಮೊದಲ ಸಮೀಕ್ಷಾ ವರದಿಯಲ್ಲಿ ಉಲ್ಲೇಖ

ವಿಶ್ವಸಂಸ್ಥೆಯ ಶೇ 33ರಷ್ಟು ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಶ್ವಸಂಸ್ಥೆಯ ಪ್ರತಿ ಮೂರು ಸಿಬ್ಬಂದಿಯ ಪೈಕಿ ಒಬ್ಬರ ಮೇಲೆ (ಶೇ 33) ಲೈಂಗಿಕ ಕಿರುಕುಳ ನಡೆದಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಲೈಂಗಿಕ ಕಿರುಕುಳದಂತಹ ಘಟನೆಗಳನ್ನು ಪತ್ತೆಹಚ್ಚಲು ಮೊದಲ ಬಾರಿಗೆ ಕೈಗೊಂಡಿದ್ದ ಸಮೀಕ್ಷೆಯ ವರದಿಯು ಮಂಗಳವಾರ ಬಿಡುಗಡೆಯಾಗಿದೆ. 

ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಸಂಸ್ಥೆಯ ಉದ್ಯೋಗಿಗಳಿಗೆ ಬರೆದಿರುವ ಪತ್ರದಲ್ಲಿ ಅಂಕಿ–ಅಂಶ, ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ. ಉದ್ಯೋಗದ ಸ್ಥಳವನ್ನು ಉತ್ತಮಗೊಳಿಸುವ ಕೆಲವು ಸಲಹೆಗಳನ್ನೂ ಪತ್ರ ಒಳಗೊಂಡಿದೆ. 

ಮನ ನೋಯಿಸುವ ಲೈಂಗಿಕ ಕತೆಗಳು ಅಥವಾ ಜೋಕ್‌ಗಳು ಬಹುತೇಕ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಕಂಡುಬಂದಿವೆ. 

ಲೈಂಗಿಕ ವಿಷಯ ಕುರಿತ ಮಾತುಕತೆ, ಅಕ್ಷೇಪಾರ್ಹ ಭಂಗಿ ಅಥವಾ ಸ್ಪರ್ಶಿಸಲು ಮುಂದಾದಾಗ ಅದಕ್ಕೆ ಸಹಮತ ನೀಡಿದ ಉದ್ಯೋಗಿಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಡೆಲೊಯಿಟ್ ಎಂಬ ಸಂಸ್ಥೆ ನವೆಂಬರ್‌ನಲ್ಲಿ ನಡೆದ ಸಮೀಕ್ಷೆ ತಿಳಿಸಿದೆ. 

ಸಮೀಕ್ಷೆ ವೇಳೆ ಒಟ್ಟು 30,364 ಉದ್ಯೋಗಿಗಳು ಪ್ರಶ್ನಾವಳಿಗೆ ಉತ್ತರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು