ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಮಂಗಳವಾರ, 10–5–1994

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಆಫ್ರಿಕ ಅಧ್ಯಕ್ಷರಾಗಿ ಮಂಡೇಲಾ ಆಯ್ಕೆ
ಕೇಪ್‌ಟೌನ್, ಮೇ 9 (ಎಪಿ, ಪಿಟಿಐ)– ಆ
ಫ್ರಿಕನ್ ನ್ಯಾಷನಲ್ ಕಾಂಗ್ರೆಸ್‌ನ ನಾಯಕ ಡಾ. ನೆಲ್ಸನ್ ಮಂಡೇಲಾ ಅವರು ದಕ್ಷಿಣ ಆಫ್ರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷರಾಗಿ ಇಂದು ಆಯ್ಕೆಯಾದರು. ದಕ್ಷಿಣ ಆಫ್ರಿಕದ ಇತಿಹಾಸದಲ್ಲಿ ಮೂರು ಶತಮಾನಗಳಿಗಿಂತಲೂ ಹೆಚ್ಚು ಕಾಲದ ಬಿಳಿಯರ ಆಧಿಪತ್ಯ ಇದರೊಂದಿಗೆ ಕೊನೆಗೊಂಡಿತು.

ಮಾಜಿ ಅಧ್ಯಕ್ಷ ಎಫ್.ಡಬ್ಲ್ಯೂ.ಡಿ. ಕ್ಲರ್ಕ್ ಅವರ ಸ್ಥಾನವನ್ನು ತುಂಬಲು ಮಂಡೇಲಾ ಅವರೊಬ್ಬರೇ ಅಭ್ಯರ್ಥಿಯಾಗಿದ್ದರು. ಆದ್ದರಿಂದ ಮಂಡೇಲಾ ಅವರ ಆಯ್ಕೆಯನ್ನು ಮುಖ್ಯ ನ್ಯಾಯಮೂರ್ತಿ ಮೈಕೆಲ್ ಕಾರ್ಬೆಟ್ ಅವರು ಪ್ರಕಟಿಸುತ್ತಲೇ 400 ಸದಸ್ಯ ಬಲದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಕರತಾಡನ ಮುಗಿಲು ಮುಟ್ಟಿತು.

ಮಂಡೇಲಾ ಹಾಗೂ ಇತರ 399 ಮಂದಿ ಅಸೆಂಬ್ಲಿಯ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ: ಕೇಂದ್ರ ನಿರ್ಧಾರ
ನವದೆಹಲಿ, ಮೇ 9–
ಅಂತರ ರಾಷ್ಟ್ರೀಯ ಮಟ್ಟದ ಆದರೆ ದೇಶೀಯ ವಿಮಾನ ಸೌಲಭ್ಯಕ್ಕಾಗಿ ಬೆಂಗಳೂರಿನ ದೇವನಹಳ್ಳಿ ಸಮೀಪ ಸುಮಾರು 2,500 ಎಕರೆ ಪ್ರದೇಶದಲ್ಲಿ ಆಧುನಿಕ ವಿಮಾನ ನಿಲ್ದಾಣವೊಂದನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು