ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶನಿವಾರ, 18–2–1995

Last Updated 17 ಫೆಬ್ರುವರಿ 2020, 16:07 IST
ಅಕ್ಷರ ಗಾತ್ರ

ಬೆಂಗಳೂರು ಪಾಲಿಕೆ ಆದಾಯ ಸೋರಿಕೆ: ತನಿಖೆಗೆ ಗೌಡರ ಆದೇಶ
ಬೆಂಗಳೂರು, ಫೆ. 17: ಬೆಂಗಳೂರು ಮಹಾನಗರ ಪಾಲಿಕೆಯಿಂದ ಪ್ರತಿಷ್ಠಿತ ವ್ಯಾಪಾರಿ ಸಂಸ್ಥೆಗಳು ಆಸ್ತಿ ತೆರಿಗೆ ವಿನಾಯಿತಿ ಪಡೆದುಕೊಂಡಿರುವುದು ಹಣ ಸೋರಿಕೆಗೆ ಕಾರಣವಾಗಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ಒಂದು ವಾರದಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ವಸತಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.

ವಿನಾಯಿತಿ ಪಡೆದಿರುವ ಪ್ರಕರಣಗಳನ್ನು ಪುನರ್‌ಪರಿಶೀಲಿಸಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮದಲ್ಲಿ ಸಿಂಗಪುರ ಆಸಕ್ತಿ
ಸಿಂಗಪುರ, ಫೆ. 17 (ಪಿಟಿಐ): ಕರ್ನಾಟಕದಲ್ಲಿ ಪ್ರವಾಸೋದ್ಯಮದ ಬಗ್ಗೆ ಇರುವ ವಿಪುಲ ಅವಕಾಶವನ್ನು ಬಳಸಿಕೊಳ್ಳಲು ಸಿಂಗಪುರದ ಪ್ರವಾಸೋದ್ಯಮಿಗಳು ತೀವ್ರ ಆಸಕ್ತಿ ತೋರಿದ್ದಾರೆ. ವಾಣಿಜ್ಯ ನಿಯೋಗದ ಜತೆ ಸಿಂಗಪುರಕ್ಕೆ ಭೇಟಿ ನೀಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಅವರು ಈ ವಿಷಯ ತಿಳಿಸಿದರು.

ಕರ್ನಾಟಕದಲ್ಲಿನ ಪ್ರವಾಸೋದ್ಯಮ ಯೋಜನೆಗಳಲ್ಲಿ ಬಂಡವಾಳ ತೊಡಗಿಸಲು ಭಾರತೀಯ ಉದ್ಯಮಿಗಳೊಂದಿಗೆ ಸಹಯೋಗ ಹೊಂದುವಂತೆ ಸಿಂಗಪುರದ ಉದ್ಯಮಿಗಳ ಜತೆ ಮಾತುಕತೆ ನಡೆಸಿದ್ದಾಗಿ ಪಟೇಲ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT