ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ | ಸೋಮವಾರ, 23–10–1995

Last Updated 22 ಅಕ್ಟೋಬರ್ 2020, 17:15 IST
ಅಕ್ಷರ ಗಾತ್ರ

ರಾಜ್ಯದ ಎಲ್ಲ ಅಕ್ರಮ ಕಟ್ಟಡ ಸಕ್ರಮ

ಬೆಂಗಳೂರು, ಅ. 22– ಬರುವ ನ. 1ರ ಒಳಗೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯ ಅಕ್ರಮ ಕಟ್ಟಡ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಇಂದು ಘೋಷಿಸಿದರು.

ಭೂ ಸುಧಾರಣಾ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯ ಬಗ್ಗೆ ಕೇಂದ್ರ ಸಚಿವ ಜಗನ್ನಾಥ ಮಿಶ್ರಾ ಅವರು ಆಕ್ಷೇಪ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿದ ದೇವೇಗೌಡರು, ‘ಯಾರು ಏನಾದರೂ ತಮಟೆ ಬಾರಿಸಿಕೊಂಡು ಹೋಗಲಿ, ನಾವು ನಮ್ಮ ಕೆಲಸ ಮುಂದುವರಿಸ್ತೇವೆ’ ಎಂದರು.

ಬಿಜೆಪಿ ಸರ್ಕಾರ ರಚನೆ ತಪ್ಪಿಸಲು ಯತ್ನ

ಲಖನೌ, ಅ. 22 (ಯುಎನ್‌ಐ)– ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್‌ ಯಾದವ್‌ ಅವರು ಈ ತಿಂಗಳ 25ರಂದು ಪಕ್ಷದ ಶಾಸಕರ ತುರ್ತು ಸಭೆ ಕರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT