ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ 25 ವರ್ಷಗಳ ಹಿಂದೆ: ಮಂಗಳವಾರ, 17–10–1995

Last Updated 16 ಅಕ್ಟೋಬರ್ 2020, 19:32 IST
ಅಕ್ಷರ ಗಾತ್ರ

ಸಾರಿಗೆ ಸಂಸ್ಥೆ ಸಿಬ್ಬಂದಿ ಸಂಪು,ರಾಜ್ಯದಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು, ಅ. 16– ಬೇಡಿಕೆಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಇಂದಿನಿಂದ ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಸತ್ಯಾಗ್ರಹ ಬೆಂಬಲಿಸಿ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದಾದ್ಯಂತ ಸಂಚಾರ ವ್ಯವಸ್ಥೆಅಸ್ತವ್ಯಸ್ತಗೊಂಡಿದೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮುಂತಾದ ನಗರಗಳು ಸೇರಿದಂತೆ ಸಾರ್ವಜನಿಕ ಸಾರಿಗೆ ಸೌಕರ್ಯ
ಅಸ್ತವ್ಯಸ್ತವಾಗಿರುವ ಕಡೆಗಳಲ್ಲಿಪ್ರಯಾಣಿಕರನ್ನು ಮುಕ್ತವಾಗಿ ಕರೆದೊಯ್ಯುವ ಅನುಮತಿಯನ್ನು ಖಾಸಗಿ ವಾಹನಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವ ಪಿ.ಜಿ.ಆರ್. ಸಿಂಧ್ಯ ಈ ರಾತ್ರಿ ಇಲ್ಲಿ ಪ್ರಕಟಿಸಿದರು.

ನಟ ತೂಗುದೀಪ ಶ್ರೀನಿವಾಸ್ ನಿಧನ

ಮೈಸೂರು, ಅ. 16– ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಹಿರಿಯ ಕಲಾವಿದ ತೂಗುದೀಪ ಶ್ರೀನಿವಾಸ್ ಅವರು ಇಲ್ಲಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಕನ್ನಡದ ‘ತೂಗುದೀಪ’ ಚಿತ್ರದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ ಶ್ರೀನಿವಾಸ್ ಅವರು ಉತ್ತಮ ಅಭಿನಯದಿಂದಾಗಿ ‘ತೂಗುದೀಪ ಶ್ರೀನಿವಾಸ್’ ಎಂದೇ ಜನಪ್ರಿಯರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT