ಬುಧವಾರ, ನವೆಂಬರ್ 25, 2020
21 °C

ಪ್ರಜಾವಾಣಿ 25 ವರ್ಷಗಳ ಹಿಂದೆ: ಶುಕ್ರವಾರ, 20–10–1995

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಲಿಪ್ತ ಶೃಂಗದಲ್ಲಿ ಬೆನಜೀರ್‌ಗೆ ಪ್ರಧಾನಿ ರಾವ್‌ ತರಾಟೆ

ಕಾರ್ತಿಹೇನಾ, ಅ. 19– ಅಲಿಪ್ತ ರಾಷ್ಟ್ರಗಳ ಶೃಂಗಸಭೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದಕ್ಕಾಗಿ ಪಾಕಿಸ್ತಾನದ ಪ್ರಧಾನಿ ಬೆನಜೀರ್‌ ಭುಟ್ಟೊ ಅವರನ್ನು ಪ್ರಧಾನಿ ಪಿ.ವಿ. ನರಸಿಂಹರಾವ್‌ ಅವರು ಬುಧವಾರ ಇಲ್ಲಿ ತರಾಟೆಗೆ ತೆಗೆದುಕೊಂಡರು.

‘ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರದ ಭಾಗದಿಂದ ತೊಲಗುವಂತೆ’ ಅವರು ಈ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ತಾಕೀತು ಮಾಡಿದರು. ಇದನ್ನು ಬಿಟ್ಟರೆ ಕಾಶ್ಮೀರದಲ್ಲಿ ಯಾವುದೇ ವಿವಾದ ಇಲ್ಲ ಎಂದು ಅಲಿಪ್ತ ಶೃಂಗಸಭೆಯಲ್ಲಿ ನರಸಿಂಹರಾವ್‌ ಹೇಳಿದರು.

ಪೊಲೀಸರ ನೇಮಕಕ್ಕೆ ಪ್ರತ್ಯೇಕ ಮಂಡಲಿ

ಬೆಂಗಳೂರು, ಅ. 19– ಪೊಲೀಸರ ನೇಮಕಾತಿಗಾಗಿ ತಮಿಳುನಾಡಿನ ಮಾದರಿಯಲ್ಲಿ ಪ್ರತ್ಯೇಕ ನೇಮಕಾತಿ ಮಂಡಲಿ ರಚಿಸುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ ಎಂದು ಗೃಹ ಸಚಿವ ಪಿ.ಜಿ.ಆರ್‌ ಸಿಂಧ್ಯ ಅವರು ಇಂದು ಇಲ್ಲಿ ತಿಳಿಸಿದರು.

ಪೊಲೀಸ್‌ ಇಲಾಖೆಯಲ್ಲಿ ಇಲಾಖಾ ತನಿಖೆಗೆ ಒಳಪಟ್ಟ ಪ್ರಕರಣಗಳನ್ನು ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಅವರು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು