ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಭಾನುವಾರ, 13–8–1995

Last Updated 12 ಆಗಸ್ಟ್ 2020, 19:30 IST
ಅಕ್ಷರ ಗಾತ್ರ

ರೈಲ್ವೆ ಹುದ್ದೆ ನೇಮಕ– ಸ್ಥಳೀಯರಿಗೆ ಆದ್ಯತೆ ನೀಡಲು ಷರೀಫ್‌ ಆದೇಶ
ಬೆಂಗಳೂರು, ಆ. 12–
ಕರ್ನಾಟಕದಲ್ಲಿ ರೈಲ್ವೆ ಇಲಾಖೆ ಹುದ್ದೆಗಳಿಗೆ ನೇಮಕ ಮಾಡುವಾಗ ಸ್ಥಳೀಯರಿಗೇ ಹೆಚ್ಚಿನ ಆದ್ಯತೆ ನೀಡಬೇಕೆಂದು ರೈಲ್ವೆ ಸಚಿವ ಸಿ.ಕೆ.ಜಾಫರ್‌ ಷರೀಫ್‌ ಅವರು ರೈಲ್ವೆ ಮಂಡಳಿಯ ಅಧಿ ಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದರು.

‘ನೇಮಕಾತಿ, ರೈಲ್ವೆ ನಿಲ್ದಾಣಗಳಲ್ಲಿರುವ ಹೋಟೆಲ್‌, ಅಂಗಡಿಗಳ ಗುತ್ತಿಗೆ ನೀಡುವಾಗ ಸ್ಥಳೀಯ ಜನರನ್ನು ನಿರ್ಲಕ್ಷಿಸಿ, ನೆರೆ ರಾಜ್ಯದ ಜನರಿಗೇ ಈ ಎಲ್ಲ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂಬ ದೂರುಗಳು ಎಲ್ಲ ಕಡೆ ಕೇಳಿ ಬರುತ್ತಿವೆ. ರೈಲ್ವೆ ಮಂಡಳಿಯ ಅಧಿಕಾರಿಗಳು ಸ್ಥಳೀಯ ಜನರ ಭಾವನೆಗಳನ್ನು ಅರಿತು ಕೆಲಸ ಮಾಡಬೇಕಲ್ಲದೆ ಮತ್ತೆ ಇಂಥ ದೂರುಗಳು ಕೇಳಿ ಬರದಂತೆ ಎಚ್ಚರಿಕೆ ವಹಿಸಬೇಕು’ ಎಂದು ಅವರು ಸೂಚನೆ ನೀಡಿದರು.

ಬೆಂಗಳೂರು– ಮೀರಜ್‌ ಮಧ್ಯೆ ಸಂಚಾರ ಆರಂಭಿಸಿದ ‘ಕಿತ್ತೂರು ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌’ ರೈಲಿನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಭೂಮಿತಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ
ನವದೆಹಲಿ, ಆ. 12–
ನಗರ ಪ್ರದೇಶಗಳಲ್ಲಿ ಬಡವರಿಗೆ ಗುತ್ತಿಗೆದಾರರ ಮೂಲಕ ಗುಂಪು ಮನೆ ನಿರ್ಮಿಸುವ ಕರ್ನಾಟಕದ ಯೋಜನೆಗೆ ಅಡ್ಡಿ ಇರುವ ನಗರ ಭೂಮಿತಿ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಒಪ್ಪಿರುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಅವರು ಇಂದು ತಿಳಿಸಿದರು.

ರಾಜ್ಯದಲ್ಲಿ ಈಗಿನ ಸಮೀಕ್ಷೆ ಪ್ರಕಾರ, 20 ಲಕ್ಷ ಮಂದಿ ನಿವೇಶನರಹಿತ ಮತ್ತು ಮನೆ ಇಲ್ಲದವರಿದ್ದಾರೆ. ಪ್ರಸ್ತುತ ವರ್ಷದಲ್ಲಿ ಒಟ್ಟು 3.4 ಲಕ್ಷ ನಿವೇಶನ ಹಂಚಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT