ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರ, 28–1–1995

1995
Last Updated 27 ಜನವರಿ 2020, 19:45 IST
ಅಕ್ಷರ ಗಾತ್ರ

ಅಕ್ರಮ ಸಾಗುವಳಿ ಸಕ್ರಮಕ್ಕೆ ಅಧಿಕಾರಿಗಳ ನೇತೃತ್ವದ ಸಮಿತಿ

ಬೆಂಗಳೂರು, ಜ. 27– ಅಕ್ರಮ ಸಾಗುವಳಿ ಸಕ್ರಮಗೊಳಿಸಲು ಇರುವ ಶಾಸಕರ ನೇತೃತ್ವದ ಸಮಿತಿಗಳನ್ನು ರದ್ದುಗೊಳಿಸಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪುನರ್‌ರಚಿಸುವ ಆಲೋಚನೆಯಿದೆ ಎಂದು ಕಂದಾಯ ಸಚಿವ ಆರ್.ಎಲ್. ಜಾಲಪ್ಪ ಅವರು ಇಂದು ಇಲ್ಲಿ ನುಡಿದರು.

‘ಈ ಸಮಿತಿಯಲ್ಲಿ ನಾಲ್ವರು ಅಧಿಕಾರೇತರ ಸದಸ್ಯರಿರುತ್ತಾರೆ. ಇವರಲ್ಲಿ ಪರಿಶಿಷ್ಟರು, ಹಿಂದುಳಿದವರು, ಮಹಿಳೆ ಹಾಗೂ ಸಾಮಾನ್ಯ ವರ್ಗದ ಒಬ್ಬೊಬ್ಬ ಸದಸ್ಯರಿರುತ್ತಾರೆ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು. ಈಗಿರುವ ಶಾಸಕರ ನೇತೃತ್ವದ ಸಮಿತಿಗಳ ನಿರ್ವಹಣೆ ಬಗೆಗೆ ದೂರುಗಳಿರುವುದನ್ನು ಅವರು ಒಪ್ಪಿಕೊಂಡರು.

ರಾಜೀವ್ ಹತ್ಯೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಧಾರ

ನವದೆಹಲಿ, ಜ. 27 (ಪಿಟಿಐ)– ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಗೆ ಕಾರಣವಾದ ಪರಿಸ್ಥಿತಿಯ ಬಗ್ಗೆ ವರ್ಮಾ ಆಯೋಗ ತನಿಖೆ ನಡೆಸಿ ನೀಡಿರುವ ವರದಿಯಲ್ಲಿ ಹೆಸರಿಸಲಾಗಿರುವ ಉನ್ನತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಈ ಪ್ರಸ್ತಾವನೆಗೆ ಕೇಂದ್ರ ಸಂಪುಟ ಕಳೆದ ವಾರ ಒಪ್ಪಿಗೆ ನೀಡಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT