ಮಂಗಳವಾರ, ಸೆಪ್ಟೆಂಬರ್ 17, 2019
27 °C

ಬುಧವಾರ, 7–9–1994

Published:
Updated:

‘ಮೀಸಲಾತಿ: ಪ್ರತಿಪಕ್ಷಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ’

ನವದೆಹಲಿ, ಸೆ. 6 (ಪಿಟಿಐ)– ಮೀಸಲಾತಿಯ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಅನುಮತಿ ನೀಡುವಂತೆ ಇನ್ನು ಮುಂದೆ ಯಾವುದಾದರೂ ರಾಜ್ಯ ಕೇಳಿದಲ್ಲಿ ಪ್ರತಿಪಕ್ಷಗಳ ಜೊತೆ ಸಮಾಲೋಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಕಲ್ಯಾಣ ಸಚಿವ ಸೀತಾರಾಂ ಕೇಸರಿ ಇಂದು ಇಲ್ಲಿ ಹೇಳಿದರು.

ಮೀಸಲಾತಿ ಪ್ರಮಾಣ ಶೇ 50ನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ. ವಿಶೇಷ ಸಂದರ್ಭಗಳಲ್ಲಿ ಮೀಸಲಾತಿಯ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಬಹುದು ಎಂದು ತಿಳಿಸಿದೆ. ಆದರೆ ಸಂವಿಧಾನದಲ್ಲಿ ಈ ರೀತಿಯ ನಿರ್ಬಂಧವನ್ನು ಪ್ರಸ್ತಾಪಿಸಿಲ್ಲ ಎಂದರು.

ಶೇಷನ್ ಜತೆ ಘರ್ಷಣೆ ಬೇಡ

ನವದೆಹಲಿ, ಸೆ. 6– ಸದ್ಯದಲ್ಲಿಯೇ ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಯುವುದರಿಂದ ಮುಖ್ಯ ಚುನಾವಣಾ ಕಮೀಷನರ್ ಟಿ.ಎನ್‌. ಶೇಷನ್ ಅವರ ಜತೆ ಘರ್ಷಣೆಗೆ ಅವಕಾಶ ಕೊಡದಂತೆ ನಡೆದುಕೊಳ್ಳಬೇಕೆಂದು ಪ್ರಧಾನಿ ಹಾಗೂ ಕಾಂಗೈ ಅಧ್ಯಕ್ಷ ಪಿ.ವಿ. ನರಸಿಂಹರಾವ್ ಅವರು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕಾಂಗೈ ಮುಖಂಡರುಗಳಿಗೆ ಸೂಚಿಸಿರುವುದಾಗಿ ಗೊತ್ತಾಗಿದೆ.

ಕೆಪಿಎಸ್‌ಸಿ ಮರು ಪರೀಕ್ಷೆಗೆ ಆಗ್ರಹ

ಬೆಂಗಳೂರು, ಸೆ. 6– ರಾಜ್ಯ ಲೋಕಸೇವಾ ಆಯೋಗದ ವಿವಾದಾಸ್ಪದ ‘ಎ’ ಮತ್ತು ‘ಬಿ’ ಗುಂಪಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಮಾಡುವ ನಿರ್ಧಾರವನ್ನು ತಕ್ಷಣವೇ ಕೈಬಿಟ್ಟು ಮರು ಪರೀಕ್ಷೆ ನಡೆಸಲೇಬೇಕು ಎಂದು ಕೆಪಿಎಸ್‌ಸಿ ಭ್ರಷ್ಟಾಚಾರ ವಿರೋಧಿ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.

Post Comments (+)